ಗುಜರಾತ್ ಫಾರ್ಮಾ ಕಂಪೆನಿಯಲ್ಲಿ ಸ್ಫೋಟ: ಇಬ್ಬರು ಮೃತ್ಯು, 2 ಮಂದಿಗೆ ಗಾಯ

ವಲ್ಸಾದ್(ಗುಜರಾತ್): ಫಾರ್ಮಾ ಕಂಪನಿಯೊಂದರಲ್ಲಿ ಹಠಾತ್ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಅಧಿಕಾರಿಗಳ ಪ್ರಕಾರ, ವಲ್ಸಾದ್ ಜಿಲ್ಲೆಯ ಸರಿಗಾಮ್ ಜಿಐಡಿಸಿ ಕೆಮಿಕಲ್ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಹಠಾತ್ ಸ್ಫೋಟ ಸಂಭವಿಸಿದೆ.
ಘಟನೆಯ ವೇಳೆ ಕಟ್ಟಡದ ಒಂದು ಭಾಗ ಕುಸಿದಿದೆ.
ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಸ್ಫೋಟದ ಹಿಂದಿನ ಕಾರಣ ಹಾಗೂ ಫ್ಯಾಕ್ಟರಿಯ ಒಳಗಿದ್ದ ಕಾರ್ಮಿಕರ ಪರಿಸ್ಥಿತಿ ಹೇಗಿದೆ ಎಂದು ಇನ್ನಷ್ಟೇ ಗೊತ್ತಾಗಬೇಕಾಗದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
"ನಿನ್ನೆ ರಾತ್ರಿ 11.30 ರ ಸುಮಾರಿಗೆ ಸರಿಗಮ್ ಜಿಐಡಿಸಿಯ ಕಂಪನಿಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಇಬ್ಬರು ಗಾಯಗೊಂಡಿದ್ದಾರೆ" ಎಂದು ವಲ್ಸಾಡ್ ಎಸ್ಪಿ ವಿಜಯ್ ಸಿಂಗ್ ಗುರ್ಜರ್ ಹೇಳಿದರು,
Next Story





