ಬಿಜೆಪಿ ಕಚೇರಿಗೆ ಆಪ್ ನಾಯಕ ಭಾಸ್ಕರ್ ರಾವ್ ಭೇಟಿ!

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ, ಆಮ್ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಅವರು ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿ, ಬಳಿಕ ಸಚಿವ ಆರ್.ಅಶೋಕ್ ಅವರನ್ನೂ ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.
ಸದ್ಯ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿರುವ ಭಾಸ್ಕರ್ ರಾವ್ ಅವರ ಈ ನಡೆ ರಾಜಕೀಯ ವಲಯದಲ್ಲಿ ಬಿಜೆಪಿ ಸೇರುತ್ತಾರೆಂಬ ಕುತೂಹಲ ಮೂಡಿಸಿದೆ.
ಇದನ್ನೂ ಓದಿ: ರಾಜಕೀಯ ನಿವೃತ್ತಿ ಬಗ್ಗೆ ಶಾಸಕ ತನ್ವೀರ್ ಸೇಠ್ ಹೇಳಿದ್ದೇನು?
Next Story