ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಬೆಂಗಳೂರು, ಫೆ.28 ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ವಾಯುಪಡೆಯ ವಿಶೇಷ ವಿಮಾನದ ಮೂಲಕ ಮಂಗಳವಾರ ಸಂಜೆ ನಗರದ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಉಪ ರಾಷ್ಟ್ರಪತಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ನಂತರ ಉಪರಾಷ್ಟ್ರಪತಿಗಳಿಗೆ ರಕ್ಷಣಾ ಇಲಾಖೆಯ ಗೌರವರಕ್ಷೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಾಯುಪಡೆ ಹಾಗೂ ಹೆಚ್.ಎ.ಎಲ್ ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
.jpeg)

.jpeg)
Next Story