Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎ.30 ರಿಂದ ಕೊಲ್ಲೂರಿನ ಶ್ರೀ ಮೂಕಾಂಬಿಕಾ...

ಎ.30 ರಿಂದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ಅಷ್ಟಬಂಧ ಬ್ರಹ್ಮ ಕಲಶೋತ್ಸವ

28 Feb 2023 1:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎ.30 ರಿಂದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ಅಷ್ಟಬಂಧ ಬ್ರಹ್ಮ ಕಲಶೋತ್ಸವ

ಕೊಲ್ಲೂರು, ಫೆ.28: 21 ವರ್ಷಗಳ ನಂತರ ಮುಂಬರುವ ಎ.30ರಿಂದ ಮೇ 11ರವರೆಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ತಿಳಿಸಿದ್ದಾರೆ.

ಮಂಗಳವಾರ ಕೊಲ್ಲೂರಿನಲ್ಲಿ ಕರೆದ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಕೊಲ್ಲೂರು ಮೂಕಾಂಬಿಕೆಗೆ 1972ರಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ನಡೆದ 30 ವರ್ಷಗಳ ಬಳಿಕ 2002ರಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದಿದೆ. ಇದೀಗ ಮತ್ತೆ 21 ವರ್ಷಗಳ ನಂತರ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದೆ ಎಂದರು.

ಆಗಮಶಾಸ್ತ್ರದ ಪ್ರಕಾರ ಪ್ರತಿ 12 ವರ್ಷಗಳಿಗೊಮ್ಮೆ ಅಷ್ಟಬಂಧ ನಡೆಯಬೇಕಾಗಿದೆ. ಆದರೆ ಕಾರಣಾಂತರ ಗಳಿಂದ ಕಳೆದ 21 ವರ್ಷಗಳಿಂದ ಇದು ನಡೆದಿಲ್ಲ. ಈ ದೇವತಾ ಕಾರ್ಯ ನಡೆಸಲು ಈಗ ಕಾಲ ಕೂಡಿ ಬಂದಿದೆ. ಎಲ್ಲರ ಅಭಿಪ್ರಾಯ ಪಡೆದುಕೊಂಡು ಉತ್ಸವ ದಿನಾಂಕ ನಿಶ್ಚಯ ಮಾಡಲಾಗಿದ್ದು, ಕ್ಷೇತ್ರದ ಅರ್ಚಕರ ಹಾಗೂ ಭಕ್ತರ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು. 

1972ರಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸುವಾಗ ದೇವಸ್ಥಾನದ ಪರಿವಾರ ದೇವರುಗಳಲ್ಲಿ ಪ್ರಮುಖವಾದ ವೀರಭದ್ರ ದೇವರ ಗುಡಿಯ ಜೀರ್ಣೋದ್ಧಾರ ಕಾರ್ಯ ನಡೆಸಲಾಗಿತ್ತು. 2002ರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಕ್ಷೇತ್ರಕ್ಕೆ ನೂತನ ಶಿಲಾ ಮಹಾದ್ವಾರ, ಸ್ವಾಗತ ಗೋಪುರ ಹಾಗೂ ಸ್ವರ್ಣಲೇಪಿತ ಧ್ವಜಸ್ಥಂಭ ಸಮರ್ಪಣೆ ಕಾರ್ಯ ನಡೆದಿತ್ತು. ಈ ಬಾರಿಯ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವದಲ್ಲಿ ವೀರಭದ್ರ ದೇವರ ನೂತನ ಶಿಲಾಮಯ ದೇವಸ್ಥಾನ ಹಾಗೂ ನೂತನ ಬ್ರಹ್ಮರಥ ಲೋಕಾರ್ಪಣೆಯಾಗಿರುವುದು ವಿಶೇಷವಾಗಿದೆ ಎಂದರು.

ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ಕೆ ಅಂದಾಜು 5 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿದ್ದು, ದೇವಸ್ಥಾನದಿಂದ 2 ಕೋಟಿ ರೂ. ಬಳಸಿಕೊಳ್ಳಲು ಹಾಗೂ ಉಳಿದ 3 ಕೋಟಿಯನ್ನು ಭಕ್ತರಿಂದ ಸಂಗ್ರಹಿಸಿ ಖರ್ಚು ಮಾಡಲು ಸರಕಾರ ಅನುಮತಿ ನೀಡಿದೆ ಎಂದು ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಹಾಗೂ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದರು.

ಈ ನಿಟ್ಟಿನಲ್ಲಿ ಎಲ್ಲಾ ಸಹೃದಯ ಭಕ್ತರ ಸಹಕಾರವನ್ನು ಕೋರಲಾಗಿದೆ ಎಂದ ಅವರು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸಲು ಯೋಜನೆ ರೂಪಿಸಲಾಗುವುದು. ಜಿಲ್ಲಾಡಳಿತ, ಮುಜರಾಯಿ ಇಲಾಖೆ, ಸರಕಾರ ಹಾಗೂ ಭಕ್ತರಿಂದ ಎಲ್ಲಾ ರೀತಿಯ ಸಹಕಾರ ಪಡೆದುಕೊಳ್ಳಲಾಗುವುದು. ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ದೇಣಿಗೆ ನೀಡುವವರಿಗೆ ದೇವಸ್ಥಾನದ ಒಳ ಭಾಗದ ವಿಶೇಷ ಕೌಂಟರ್ ಹೊರತು ಪಡಿಸಿ ಬೇರೆ ಎಲ್ಲಿಯೂ ನಗದು ಪಾವತಿಗೆ ಅವಕಾಶ ಇಲ್ಲ. ದೇಣಿಗೆ ನೀಡುವವರು ಕೊಲ್ಲೂರು ಕೆನರಾ ಬ್ಯಾಂಕ್ ಉಳಿತಾಯ ಖಾತೆ ಸಂಖ್ಯೆ 01752200000014 (ಐಎಫ್‌ಎಸ್‌ಸಿ: ಸಿಎನ್‌ಆರ್‌ಬಿ0010175, ಎಂಐಸಿಆರ್:576015049)ಕ್ಕೆ ಆನ್ ಲೈನ್ ಮೂಲಕ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿಯೂ ಹಣ ಸಂದಾಯ ಮಾಡಲು ಅವಕಾಶ ನೀಡಲಾಗಿದೆ ಎಂದರು.

ದೇವಸ್ಥಾನದ ತಂತ್ರಿಗಳಾದ ರಾಮಚಂದ್ರ ಅಡಿಗ ಮಾತನಾಡಿ, ಅಷ್ಟಬಂಧ ಬ್ರಹ್ಮಕಲಶೋತ್ಸವ ಆಗುವುದರಿಂದ ಸಾನಿಧ್ಯದ ಶಕ್ತಿ ವೃದ್ಧಿಸುತ್ತದೆ ಎನ್ನುವ ನಂಬಿಕೆ ಇದೆ. ವಿಶ್ವದ ಪ್ರಾಚೀನ ಕ್ಷೇತ್ರಗಳಲ್ಲಿ ಒಂದಾಗಿರುವ ಕೊಲ್ಲೂರು ಕ್ಷೇತ್ರದಲ್ಲಿ ಉದ್ಭವ ಲಿಂಗ ಸ್ವರೂಪದಲ್ಲಿ ಸ್ವರ್ಣ ರೇಖೆ ಹೊಂದಿರುವ ಅಪೂರ್ವವಾದ ‘ಸ್ವಯಂಭೂ’ ವಿಗೆ ನಡೆಯುವ ಅಪೂರ್ವವಾದ ಧಾರ್ಮಿಕ ವಿಧಿಯನ್ನು ಭಕ್ತರು ನೋಡಿ ಕಣ್ತುಂಬಿಕೊಳ್ಳಬೇಕು ಎಂದರು.

ಈ ಹಿಂದೆ ನಿಗದಿಯಾದ ಬ್ರಹ್ಮಕಲಶೋತ್ಸವವನ್ನು ಭಕ್ತರ ಒಂದು ವರ್ಗದಲ್ಲಿ ಕೇಳಿಬಂದ ಆಕ್ಷೇಪಗಳಿಂದ ಮುಂದೂಡಲಾಗಿದ್ದರೂ, ಅಂದು ಆಕ್ಷೇಪಿಸಿದವರೂ ಈ ಬಾರಿ ಒಪ್ಪಿಗೆ ಸೂಚಿಸಿದ್ದು, ಎಲ್ಲಾ ವರ್ಗಗಳೊಂದಿಗೆ ಸಮಾಲೋಚಿಸಿ ದಿನಾಂಕವನ್ನು ನಿಗದಿ ಪಡಿಸಿದ್ದೇವೆ ಎಂದು ಚಂದ್ರಶೇಖರ  ಶೆಟ್ಟಿ ಸ್ಪಷ್ಟಪಡಿಸಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ಅತುಲ್ ಕುಮಾರ ಶೆಟ್ಟಿ, ಗಣೇಶ್ ಕಿಣಿ ಬೆಳ್ವೆ, ಗೋಪಾಲಕೃಷ್ಣ ನಾಡ, ಜಯಾನಂದ ಹೋಬಳಿದಾರ್, ಸಂಧ್ಯಾ ರಮೇಶ್, ರತ್ನಾ ರಮೇಶ್ ಕುಂದರ, ಕೆ.ಪಿ.ಶೇಖರ ಪೂಜಾರಿ, ದೇವಸ್ಥಾನದ ಸಂತೋಷ್ ಕೊಠಾರಿ, ಪ್ರದೀಪ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X