Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಂಚಗಂಗಾವಳಿಗೆ ಕೊಳಚೆ ನೀರು ಬಿಟ್ಟರೆ...

ಪಂಚಗಂಗಾವಳಿಗೆ ಕೊಳಚೆ ನೀರು ಬಿಟ್ಟರೆ ಕಾನೂನು ಪ್ರಕ್ರಿಯೆ: ಕುಂದಾಪುರ ಪುರಸಭೆ ವಿಪಕ್ಷ ನಾಯಕ ಎಚ್ಚರಿಕೆ

28 Feb 2023 9:56 PM IST
share
ಪಂಚಗಂಗಾವಳಿಗೆ ಕೊಳಚೆ ನೀರು ಬಿಟ್ಟರೆ ಕಾನೂನು ಪ್ರಕ್ರಿಯೆ: ಕುಂದಾಪುರ ಪುರಸಭೆ ವಿಪಕ್ಷ ನಾಯಕ ಎಚ್ಚರಿಕೆ

ಕುಂದಾಪುರ, ಫೆ.28: ಹಲವು ವರ್ಷಗಳಿಂದ ನಗರದ ಕೊಳಚೆ ನೀರನ್ನು ಜನವಸತಿ ಪ್ರದೇಶದ ಸನಿಹದ ಪಂಚ ಗಂಗಾವಳಿ ನದಿಗೆ ಬಿಡುವುದನ್ನು ಇನ್ನೂ ಮುಂದುವರೆಸಿದರೆ, ಸ್ಥಳೀಯ ಜನರನ್ನು ಒಟ್ಟುಗೂಡಿಸಿ ಪುರಸಭೆಯ ವಿರುದ್ಧ ಹೋರಾಟ ಮಾಡುವುದಲ್ಲದೆ, ಕಾನೂನು ಪ್ರಕ್ರಿಯೆ ನಡೆಸುತ್ತೇವೆ ಎಂದು ಪುರಸಭೆಯ ವಿಪಕ್ಷ ನಾಯಕ ಚಂದ್ರಶೇಖರ ಖಾರ್ವಿ ಎಚ್ಚರಿಕೆ ನೀಡಿದ್ದಾರೆ.

ಪುರಸಭೆಯ ಡಾ.ವಿ.ಎಸ್.ಆಚಾರ್ಯ ಸಭಾಭವನದಲ್ಲಿ ಮಂಗಳವಾರ ಸಂಜೆ ನಡೆದ ಪುರಸಭೆ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ನಗರದಲ್ಲಿ ನೆನಗುದಿಗೆ ಬಿದ್ದ ಒಳಚರಂಡಿ ಯೋಜನೆಯ (ಯುಜಿಡಿ) ಕಾಮಗಾರಿ ಕುರಿತಂತೆ ಮಾತನಾಡಿದ ಅವರು, ಕಳೆದ  10 ವರ್ಷಗಳಿಂದ ಯೋಜನೆ ಕುಂಟುತ್ತಾ ಸಾಗುತ್ತಿದ್ದು ಜನರ ಸಹನೆಯ ಕಟ್ಟೆಯೊಡೆದಿದೆ.  ಜನರನ್ನು ಸಮಾಧಾನ ಮಾಡಿ ಸಾಕಾಗಿದೆ. ಇಲ್ಲಿನ ಹೊಲಸು ಹಾಗೂ ಕೊಳಚೆ ನೀರು ಎಲ್ಲಿಗೆ ಹೋಗುತ್ತಿದೆ ಎಂಬ ಬಗ್ಗೆ ಪುರಸಭೆಗೆ ಕಾಳಜಿಯಿಲ್ಲ ಎಂದು ದೂರಿದರು.

ದೊಡ್ಡ ಮೊತ್ತವನ್ನು ವೆಚ್ಚ ಮಾಡಿರುವ ಯುಜಿಡಿ ಯೋಜನೆಯ ವೈಫಲ್ಯದ ಬಗ್ಗೆ ಜನರಿಗೆ ನಿಜ ತಿಳಿಯಬೇಕು. ಪುರಸಭೆಯಿಂದ ಸಂಗ್ರಹವಾಗುವ ಒಂದೇ ಒಂದು ಟ್ಯಾಂಕ್ ಕೊಳಚೆ ನೀರನ್ನು ಇಲ್ಲಿನ ನದಿಗಳಿಗೆ ಬಿಟ್ಟು ಕಲುಷಿತ ಗೊಳಿಸಿದರೆ ನಾವು ಪ್ರತಿಭಟನೆಯ ಹಾದು ತುಳಿಯಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2018ರಲ್ಲಿ ಹುಂಚಾರಬೆಟ್ಟು ಎಂಬಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಸ್ಟಿಪಿಗೆ ಕೋಟ್ಯಾಂತರ ರೂ. ವೆಚ್ಚದಲ್ಲಿ 1.54 ಸೆಂಟ್ಸ್ ಜಾಗ ಖರೀದಿಸಲಾ ಗಿದ್ದು, ಇದೀಗ ಸ್ಥಳೀಯರ ಆಗ್ರಹಕ್ಕೆ ಮಣಿದು ಸ್ಥಳೀಯ ಸದಸ್ಯರು ಎಸ್ಟಿಪಿ ಯನ್ನು ಸ್ಥಳಾಂತರಿಸಲು ಒತ್ತಾಯಿಸುತ್ತಿರುವುದರಿಂದ ಒಳಚರಂಡಿ ಯೋಜನೆಯ ಕಾಮಗಾರಿಗಳಿಗೆ ತೊಡಕಾ ಗುತ್ತಿದೆ ಎಂದು ಪಕ್ಷಬೇಧ ಮರೆತು ಪ್ರಬಲವಾಗಿ ಆಕ್ಷೇಪಿಸಿದ ಸದಸ್ಯರು, ಖಾರ್ವಿಕೇರಿಯನ್ನು ಕೊಳಚೆ ಮುಕ್ತವನ್ನಾಗಿಸಿ ಎಂದು ಆಗ್ರಹಿಸಿದರು.

ಸ್ಥಳೀಯ ಸಮಸ್ಯೆಗಳಿಗೆ ಆಡಳಿತ ಸ್ಪಂದಿಸುತ್ತಿಲ್ಲ ಎನ್ನುವ ಆರೋಪಕ್ಕೆ ಪ್ರತಿ ಸ್ಪಂದಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಜಿ.ಕೆ ಅವರು ಸ್ಥಳೀಯ ಸಮಸ್ಯೆಗಳಿಗೆ ಕಿವಿಯಾಗುವ ಪ್ರಯತ್ನ ಪುರಸಭೆಯ ಆಡಳಿತದಿಂದ ಆಗಿದೆ ಎಂದರು. ಇದೇ ವಿಚಾರದ ಕುರಿತು ಮಾತನಾಡಿದ ಅಧ್ಯಕ್ಷೆ ವೀಣಾ ಭಾಸ್ಕರ್ ಅವರು ಶೀಘ್ರದಲ್ಲಿ ಶಾಸಕ ರೊಂದಿಗೆ ವಿಶೇಷ ಸಭೆ ನಡೆಸಿ, ಪ್ರಸ್ತುತ ಇರುವ ಸಮಸ್ಯೆಗಳ ಪರಿಹಾರಕ್ಕೆ ಎಲ್ಲರು ಒಟ್ಟಾಗಿ ಪ್ರಯತ್ನಿಸೋಣ ಎಂದರು.

ನಗರದ ಜನರಿಗೆ ಕುಡಿಯುವ ನೀರಿಗಾಗಿ ಅನುಷ್ಠಾನಗೊಂಡಿರುವ ಜಲಸಿರಿ ನೀರಿನ ಯೋಜನೆಯ ನಿರ್ವಹಣೆಗಾಗಿ ನೀಡುತ್ತಿರುವ ವೆಚ್ಚ ಪುರಸಭೆಗೆ ಹೊರೆಯಾಗಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಸದಸ್ಯರು ಆಗ್ರಹಿಸಿದರು.

ಪತ್ರಿಕೆಯೊಂದರಲ್ಲಿ  ಬಂದಿರುವ ಹೇಳಿಕೆಯೊಂದರ ಅಡಿಯಲ್ಲಿ ಖಂಡನಾ ನಿರ್ಣಯ ಮಾಡುವಂತೆ ಆಗ್ರಹಿಸಿದ ಕಾಂಗ್ರೆಸ್ ಸದಸ್ಯರಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಪತ್ರಿಕಾ ಹೇಳಿಕೆಯನ್ನು ಆಧರಿಸಿ ಖಂಡನಾ ನಿರ್ಣಯ ಮಾಡದಂತೆ ಆಕ್ಷೇಪಿಸಿದರು. ಕುಂದಾಪ್ರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಪುರಸಭೆಯಿಂದ ನಿರ್ಣಯ ಮಂಡಿಸಲು ಚಂದ್ರಶೇಖರ ಖಾರ್ವಿ ಒತ್ತಾಯಿಸಿದರು.

ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸಂದೀಪ್ ಖಾರ್ವಿ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಜಿ.ಕೆ ಹಾಗೂ ಮುಖ್ಯಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.

share
Next Story
X