ಮಾ.2: ದ.ಕ.ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆ

ಮಂಗಳೂರು, ಫೆ.28: ದ.ಕ.ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆಯು ಮಾ.2ರಂದು ಅಪರಾಹ್ನ 3:30ಕ್ಕೆ ನಗರದ ಬೆಂದೂರ್ ಸಂತ ಸೆಬಾಸ್ಟಿಯನ್ ಹಾಲ್‌ನಲ್ಲಿ ನಡೆಯಲಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧ್ರುವನಾರಾಯಣ, ಶಾಸಕ ಆರ್.ವಿ. ದೇಶಪಾಂಡೆ, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ಜಿಲ್ಲಾ ಎಐಸಿಸಿ ಉಸ್ತುವಾರಿ ರೋಜಿ ಜಾನ್ ಮತ್ತಿತರರು ಭಾಗವಹಿಸಲಿರುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story