ಮಂಗಳೂರು ವಿವಿಯ ಇಂದಿನ(ಮಾ.1) ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು, ಮಾ.1: ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಇಂದು (ಮಾ.1) ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ವಿವಿಯ ಕುಲಸಚಿವ(ಪರೀಕ್ಷಾಂಗ) ಮಾ.1ರಂದು ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ವೇಳಾಪಟ್ಟಿಯನ್ನು ಶೀಘ್ರ ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Next Story