ಸರಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ತೀರ್ಮಾನ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನು ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರೆಸಿಕೊಳ್ಳುತ್ತೇವೆ. ಈಗ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರ ಜೊತೆ ಸೌಹಾರ್ದಯುತ ಸಭೆ ನಡೆದಿದ್ದು ಸೌಹಾರ್ದಯುತವಾಗಿ ಸಮಸ್ಯೆ ಬಗೆ ಹರಿಯಲಿದೆ ಎಂದು ಹೇಳಿದ್ದಾರೆ.
ಇನ್ನು ಈಗಾಗಲೇ 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘ ನೀಡಿರುವ ಕರೆಯಂತೆ ರಾಜ್ಯಾದ್ಯಂತ ಸರಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ, ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
Next Story





