Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 20 ದಿನಗಳಲ್ಲಿ 8000 ಕಿ.ಮೀ ಕ್ರಮಿಸಲಿದೆ...

20 ದಿನಗಳಲ್ಲಿ 8000 ಕಿ.ಮೀ ಕ್ರಮಿಸಲಿದೆ ವಿಜಯ ಸಂಕಲ್ಪ ಯಾತ್ರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

1 March 2023 6:40 PM IST
share
20 ದಿನಗಳಲ್ಲಿ 8000 ಕಿ.ಮೀ ಕ್ರಮಿಸಲಿದೆ ವಿಜಯ ಸಂಕಲ್ಪ ಯಾತ್ರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಚಾಮರಾಜನಗರ: ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ರಥ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜಿಲ್ಲೆಯ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನಗಾರಿ ಬಾರಿಸಿ, ಪಕ್ಷದ ಬಾವುಟ ಬೀಸುವ ಮೂಲಕ ಚಾಲನೆ ನೀಡಿದರು.

ಬಳಿಕ ಸಮಾವಶದಲ್ಲಿ ಮಾತನಾಡಿದ ನಡ್ಡಾ ಅವರು, ಮಲೆ ಮಹದೇಶ್ವರನ ದರ್ಶನ ಸ್ವಾಮಿಯನ್ನು ನೋಡುವ ಭಾಗ್ಯ ಹಾಗೂ ಆಶೀರ್ವಾದ ಪಡೆಯುವ ಸೌಭಾಗ್ಯ ದೊರೆತಿದೆ. ಹಾಗೆಯೇ ನಿಮ್ಮನ್ನು ನೋಡುವ ಭಾಗ್ಯವೂ ನನ್ನದಾಗಿದೆ. ಈ ಪವಿತ್ರ ಭೂಮಿಯಿಂದ ಮಲೆ ಮಹದೇಶ್ವರ ಸ್ವಾಮಿಯ ಆಶೀರ್ವಾದ ಪಡೆದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಿದೆ ಎಂದರು.

ರಾಜ್ಯದ ನಾಲ್ಕು ಕಡೆಗಳಿಂದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗುತ್ತಿದೆ. ರಾಜ್ಯದ ಎಲ್ಲ 224 ಕ್ಷೇತ್ರಗಳಿಗೂ ಯಾತ್ರೆ ಸಂಚರಿಸಲಿದೆ. 20 ದಿನಗಳಲ್ಲಿ 8000 ಕಿ.ಮೀ ಕ್ರಮಿಸಲಿದೆ. 75 ಸಮಾವೇಶ, 150ಕ್ಕೂ ಹೆಚ್ಚು ರೋಡ್ ಶೋಗಳು ನಡಯಲಿವೆ. ಬೆಳಗಾವಿಯಲ್ಲಿ ದೇಶದ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಇನ್ನೆರಡು ಕಡೆ ದೇಶದ ಗೃಹ ಸಚಿವ ಅಮಿತ ಶಾ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.

ನಮಗೆ ವಿಶ್ವಾಸವಿದೆ, ಕರ್ನಾಟಕದ ಜನತೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ದೇಶವು ಅತ್ಯಂತ ವೇಗದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಕಾಂಗ್ರೆಸ್ ಪಕ್ಷವು ಜಾತಿವಾದ, ಕುಟುಂಬವಾದಗಳಿಂದ ಒಡೆದು ಆಳುತ್ತಿತ್ತು. ಇಂದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲರ ವಿಶ್ವಾಸ ಪಡೆದು ಎಲ್ಲರ ಭಾರತವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲಾಗುತ್ತಿದೆ. ಜಗತ್ತಿನ ಅಗ್ರಮಾನ್ಯ ದೇಶವಾಗುವತ್ತ ಭಾರತ ಮುನ್ನಡೆಯುತ್ತಿದೆ. ನರೇಂದ್ರಮೋದಿಯವರು ಪ್ರಧಾನಿಯಾಗುವ ಮೊದಲು ಜಗತ್ತಿನಲ್ಲಿ 10ನೇ ಸ್ಥಾನದಲ್ಲಿದ್ದ ಭಾರತ, ಈಗ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಆಟೋಮೊಬೈಲ್, ಮೊಬೈಲ್, ಕೈಗಾರಿಕಾ ಮತ್ತಿತರ ಕ್ಷೇತ್ರಗಳಲ್ಲಿ ದೇಶ ಪ್ರಗತಿ ಸಾಧಿಸಿದೆ. ನಮ್ಮನ್ನು ಆಳಿದ ಬ್ರಿಟಿಷ್ ಸರ್ಕಾರವನ್ನು ಹಿಂದಿಕ್ಕಿ ಭಾರತ ಮುನ್ನಡೆಯುತ್ತಿದೆ ಎಂದು ಬಣ್ಣಿಸಿದರು.

ಇಲ್ಲಿರುವ ಸೋದರಿಯರ ಮಾತನ್ನು ಆಲಿಸಿದ್ದೇನೆ. ನಾನು ಇಲ್ಲಿ ಕೇವಲ ಸಂವಾದ ಮಾಡಲು ಮಾತ್ರ ಬಂದಿಲ್ಲ. ಈ ಪ್ರದೇಶದ ಚಿತ್ರಣವನ್ನು ಬದಲು ಮಾಡುವ ಸಂಕಲ್ಪದೊಂದಿಗೆ ಬಂದಿದ್ದೇನೆ. ಅದನ್ನು ಮಾಡಿಯೇ ಸಿದ್ಧ ಎಂಬ ಆಶ್ವಾಸನೆ ನೀಡುವೆ ಎಂದರು.

ಭಾರತದ ರಾಷ್ಟ್ರಪತಿಯಾಗಿ ಓರ್ವ ವನವಾಸಿ ಬುಡಕಟ್ಟು ಮಹಿಳೆ ಆಯ್ಕೆಯಾಗಲು, ಈ ದೇಶದ ಅತ್ಯುನ್ನತ ಸ್ಥಾನಕ್ಕೆ ಬರಲು ನರೇಂದ್ರ ಮೋದಿಯವರು ಕಾರಣ. ದೇಶದ ಪ್ರತಿಯೊಂದು ಸಮುದಾಯಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಲ್ಲ ಒಂದು ಯೋಜನೆಗಳನ್ನು ನೀಡುತ್ತಿದೆ.

ವನವಾಸಿ, ಬುಡಕಟ್ಟು ಜನರು, ಪ.ಜಾತಿ, ಪ.ಪಂಗಡ, ಯುವಕರು, ಮಹಿಳೆಯರು ಹಿಂದುಳಿದ ವರ್ಗ ಎಲ್ಲರ ಬಾಳಿನಲ್ಲಿ ಬೆಳಕಾಗುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿವೆ. ವಾಜಪೇಯಿ ಸರ್ಕಾರದಲ್ಲಿ ವನವಾಸಿ ಜನರಿಗೆ ವಿಶೇಷ ಸ್ಥಾನ ಮಾನವನ್ನು ನೀಡಿದೆ. ನರೇಂದ್ರ ಮೋದಿಯವರ ಸರ್ಕಾರ ನೀಡಿದೆ ಎಂದು ಅವರು ಹೇಳಿದರು.

ವಿವಿಧ ಜನಪದ ಕಲಾತಂಡಗಳು, ಗೊರವರ ಕುಣಿತ, ವೀರಗಾಸೆ, ಬೇಡಗಂಪಣ ನೃತ್ಯ, ಮಂಗಳವಾದ್ಯ ಮತ್ತಿತರ ಸಾಂಸ್ಕೃತಿಕ ಕಲಾ ತಂಡಗಳ ನಡುವೆ ಯಾತ್ರೆಗೆ ಚಾಲನೆ ನೀಡಲಾಯಿತು. ರಥಯಾತ್ರೆಗೆ ಸಜ್ಜುಗೊಂಡಿರುವ ಬಸ್ ಮೇಲೆ ನಿಂತು ಬಿಜೆಪಿ ನಾಯಕರು ಜನರತ್ತ ಕೈ ಬೀಸಿದರು.

share
Next Story
X