ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿ

ಬೆಂಗಳೂರು, ಮಾ.1: ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಕಾರ್ಯಕಾರಿ ಅಧಿಕಾರಿ(ಎಈ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಸ್ತೂರಿ ನಗರ ಬೆಸ್ಕಾಂನ ಎಇ ವಿದ್ಯಾ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಸಿಕ್ಕಿಬಿದ್ದಿದ್ದಾರೆ.
ಈ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿರುವ ಲೋಕಾಯುಕ್ತ ಪೊಲೀಸರು ಬೆಸ್ಕಾಂ ಎಈ ವಿದ್ಯಾರನ್ನು ವಶಕ್ಕೆ ಪಡೆದಿದ್ದಾರೆ.
Next Story