ಮುಂಬೈ - ಮಂಗಳೂರು ಜಂಕ್ಷನ್ ನಡುವೆ ವಿಶೇಷ ಸಾಪ್ತಾಹಿಕ ರೈಲು

ಉಡುಪಿ, ಮಾ.1: ಹೋಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ವಿಶೇಷ ಬೇಡಿಕೆಯ ಹಿನ್ನೆಲೆಯಲ್ಲಿ ಮುಂಬೈಯ ಲೋಕಮಾನ್ಯ ತಿಲಕ ಹಾಗೂ ಮಂಗಳೂರು ಜಂಕ್ಷನ್ ನಡುವೆ ವಿಶೇಷ ಸಾಪ್ತಾಹಿಕ ರೈಲೊಂದನ್ನು ಸೆಂಟ್ರಲ್ ರೈಲ್ವೆಯ ಸಹಯೋಗದೊಂದಿಗೆ ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.
ರೈಲು ನಂ.01165 ಮುಂಬೈ-ಮಂಗಳೂರು ಜಂಕ್ಷನ್ ವಿಶೇಷ ಸಾಪ್ತಾಹಿಕ ರೈಲು ಮಾ.7ರಂದು ರಾತ್ರಿ 10:15ಕ್ಕೆ ಲೋಕಮಾನ್ಯ ತಿಲಕ್ ರೈಲು ನಿಲ್ದಾಣದಿಂದ ಹೊರಡಲಿದ್ದು, ಮರುದಿನ ಸಂಜೆ 5:20ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಅದೇ ರೀತಿ ರೈಲು ನಂ.01166 ಮಂಗಳೂರು ಜಂಕ್ಷನ್- ಮುಂಬೈ ವಿಶೇಷ ಸಾಪ್ತಾಹಿಕ ರೈಲು ಮಾ.8ರಂದು ಸಂಜೆ 6:45ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 11:45ಕ್ಕೆ ಮುಂಬೈ ತಲುಪಲಿದೆ.
ಈ ರೈಲಿಗೆ ಥಾಣೆ, ಪನ್ವೇಲ್, ರೋಹಾ, ಖೇಡ್, ಚಿಫ್ಳುಣ್, ಸಂಗಮೇಶ್ವರ ರೋಡ್, ರತ್ನಗಿರಿ, ಕಂಕವಲ್ಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರೋಡ್, ಥೀವಿಂ, ಕರ್ಮಾಲಿ, ಮಡಗಾಂವ್ ಜಂಕ್ಷನ್, ಕಾರವಾರ, ಗೋಕರ್ಣ ರೋಡ್, ಕುಮಟಾ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ ಬೈಂದೂರು, ಕುಂದಾಪುರ, ಉಡುಪಿ, ಮುಲ್ಕಿ ಹಾಗೂ ಸುರತ್ಕಲ್ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. ರೈಲು ಒಟ್ಟು 22 ಬೋಗಿಗಳೊಂದಿಗೆ ಓಡಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.







