ಬೈಕ್ ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

ಉಡುಪಿ, ಮಾ.1: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ಶ್ರೀಬಬ್ಬುಸ್ವಾಮೀ ದೈವಸ್ಥಾನದ ಬಳಿಯ ಅಜ್ಜ ಕ್ಯಾಂಟೀನ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.1ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಮಲ್ಲಯ್ಯ(40) ಎಂದು ಗುರುತಿಸಲಾಗಿದೆ. ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ದಾಟಲು ಡಿವೈಡರ್ ಅಂಚಿನಲ್ಲಿ ನಿಂತಿದ್ದ ಮಲ್ಲಯ್ಯರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆ ಯಲ್ಲಿ ಮೃತಪಟ್ಟರು. ಅಪಘಾತದಿಂದ ತೀವ್ರವಾಗಿ ಗಾಯ ಗೊಂಡಿರುವ ಬೈಕ್ ಸವಾರ ಹರ್ಷಿತ್ ಎಂಬವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





