Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾ.3ರಿಂದ ಹಿರಿಯಡ್ಕದಲ್ಲಿ ಕೃಷಿ ಮೇಳ

ಮಾ.3ರಿಂದ ಹಿರಿಯಡ್ಕದಲ್ಲಿ ಕೃಷಿ ಮೇಳ

1 March 2023 10:04 PM IST
share
ಮಾ.3ರಿಂದ ಹಿರಿಯಡ್ಕದಲ್ಲಿ ಕೃಷಿ ಮೇಳ

ಉಡುಪಿ, ಮಾ.1: ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ ವಿವಿಧ ಸಂಸ್ಥೆ ಹಾಗೂ ಸಂಘಟನೆಗಳ ಸಹಯೋಗದೊಂದಿಗೆ ಹಿರಿಯಡಕದಲ್ಲಿ ‘ಹಿರಿಯಡಕ ಕೃಷಿ ಮೇಳ-2023’ನ್ನು ಮಾ.3ರಿಂದ 5ರವರೆಗೆ ಆಯೋಜಿಸಿದೆ ಎಂದು ಹಿರಿಯಡಕ ಕೃಷಿ ಮೇಳ ಸಮಿತಿಯ ಗೌರವಾಧ್ಯಕ್ಷ ಹಾಗೂ ಪ್ರಗತಿಪರ ಕೃಷಿಕ ಪಳ್ಳಿ ನಟರಾಜ್ ಹೆಗ್ಡೆ ಹೇಳಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯಡಕದ ವೆನಿಲ್ಲಾ ಅಭಿವೃದ್ಧಿ ಟ್ರಸ್ಟ್, ಪಳ್ಳಿ ಶ್ರೀನಿವಾಸ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಹಿರಿಯಡಕ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಮತ್ತು ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ನೈಸರ್ಗಿಕ ಕೃಷಿ ಯೋಜನೆ ವಲಯ-10, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಬ್ರಹ್ಮಾವರ ಹಾಗೂ ಜಿಲ್ಲಾ ಕೃಷಿಕ ಸಂಘಗಳು ಸಂಯುಕ್ತವಾಗಿ ಈ ಕೃಷಿ ಮೇಳ ಹಾಗೂ ಸಾಂಸ್ಕೃತಿಕ ವೈಭವವನ್ನು ಆಯೋಜಿಸಿದೆ ಎಂದವರು ತಿಳಿಸಿದರು.

ಕೃಷಿ ಮೇಳ ಹಾಗೂ ಕೃಷಿ ಪ್ರದರ್ಶನಗಳು ಹಿರಿಯಡಕ ಮಹತೋಬಾರ ಶ್ರೀವೀರಭದ್ರ ಸ್ವಾಮಿ ದೇವಸ್ಥಾನದ ಬಾಕಿಮೀರು ಗದ್ದೆಯಲ್ಲಿ ನಡೆಯಲಿದೆ. ಕೃಷಿ ಮೇಳವನ್ನು ಮಾ.3ರ ಶುಕ್ರವಾರ ಬೆಳಗ್ಗೆ 10ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ತಾಂತ್ರಿಕ ಕೈಪಿಡಿಯನ್ನು ಬಿಡುಗಡೆಗೊಳಿಸಲಿದ್ದಾರೆ.

ಮಂಗಳೂರಿನ ಕಾಂಪ್ಕೋ ಅಧ್ಯಕ್ಷ ಕಿಶೋರ್‌ಕುಮಾರ ಕೊಡ್ಗಿ ಅವರು ರೈತರನ್ನು ಸನ್ಮಾನಿಸಲಿದ್ದಾರೆ. ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ ಅವರು ವಸ್ತು ಪ್ರದರ್ಶನವನ್ನು ಉದ್ಘಾಟಿಸ ಲಿದ್ದಾರೆ. ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದು, ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಪಂ ಸಿಇಓ ಪ್ರಸನ್ನ ಎಚ್., ಶ್ಯಾಮಲಾ ಕುಂದರ್, ಕುಯಿಲಾಡಿ ಸುರೇಶ್ ನಾಯಕ್, ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು  ನಟರಾಜ ಹೆಗ್ಡೆ ತಿಳಿಸಿದರು.

ಮೂರು ದಿನಗಳ ಕೃಷಿ ಮೇಳದಲ್ಲಿ ಒಟ್ಟು ಐದು ತಾಂತ್ರಿಕ ಸಮಾವೇಶಗಳು ನಡೆಯಲಿವೆ. ತೋಟಗಾರಿಕಾ ಬೆಳೆಗಳು, ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿ, ಹೈನುಗಾರಿಕೆ ಮತ್ತು ಮೀನುಗಾರಿಕೆ, ಕೃಷಿ ಇಲಾಖೆಗಳ ಯೋಜನೆಗಳು ಮತ್ತು ಬ್ಯಾಂಕ್ ಸೌಲಭ್ಯಗಳ ಕುರಿತು ಉಪನ್ಯಾಸಗಳನ್ನು ನೀಡಲಾಗುತ್ತದೆ. ಕೊನೆಯ ದಿನವಾದ ಮಾ.5ರಂದು ಅಪರಾಹ್ನ 2:00ರಿಂದ ಸ್ಥಳೀಯ ಖಾದ್ಯ ತಯಾರಿಕೆ ಪ್ರದರ್ಶನ, ಸ್ಪರ್ಧೆ ಹಾಗೂ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದರು.

ಮಾ.5ರ ರವಿವಾರ ಸಂಜೆ 5ಕ್ಕೆ ಸಮಾರೋಪ ಸಮಾರಂಭ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಾಂಸ್ಕೃತಿಕ ವೈಭವದ ಅಂಗವಾಗಿ ಪ್ರತಿದಿನ ಸಂಜೆ 6ಕ್ಕೆ ಕ್ರಮವಾಗಿ ಗರುಡ ಪಂಚಮಿ ತುಳು ನಾಟಕ, ಸಾಲಿಗ್ರಾಮ ಮೇಳದಿಂದ ಯಕ್ಷಗಾನ ‘ಭುವನ ಭಾರತಿ’ ಹಾಗೂ ತುಳುನಾಡ ಸಂಸ್ಕೃತಿ ಪ್ರದರ್ಶನವಿರುತ್ತದೆ.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಾವರದ ಡಿಪ್ಲೋಮಾ ಕೃಷಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ವಿ.ಸುಧೀರ್ ಕಾಮತ್, ಕೆವಿಕೆ ಬ್ರಹ್ಮಾವರದ ಹಿರಿಯ ವಿಜ್ಞಾನಿ ಡಾ.ಬಿ.ಧನಂಜಯ, ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷ ಹಾಗೂ ಪ್ರಗತಿಪರ ಕೃಷಿಕ ಸುರೇಶ್ ನಾಯಕ್ ಹಾಗೂ ಸಮಿತಿಯ ಕಾರ್ಯದರ್ಶಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

share
Next Story
X