ಡಾ. ರಾಮಾನುಜಂ
ಕೊಣಾಜೆ: ದೇರಳಕಟ್ಟೆ ಸಮೀಪದ ನಾಟೆಕಲ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ಪಿ.ರಾಮಾನುಜಂ ಅವರು (79) ಅವರು ಬುಧವಾರ ನಿಧನರಾದರು.
ಇವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.
ಬಿಲ್ಲವ ಸೇವಾ ಸಮಾಜ (ರಿ ) ಕೊಲ್ಯ ಸೋಮೇಶ್ವರ, ಇದರ ಅಧ್ಯಕ್ಷರಾಗಿಯೂ, ಗೌರವ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿಯವರ ನಿಕಟವರ್ತಿಯೂ ಆಗಿ ಅನೇಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಶಾಸಕ ಯು.ಟಿ.ಖಾದರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story