Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 74 ಕೋಟಿ ರೂ. ವೆಚ್ಚ ಮಾಡಿದ್ದರೂ...

74 ಕೋಟಿ ರೂ. ವೆಚ್ಚ ಮಾಡಿದ್ದರೂ ನಿಷ್ಪ್ರಯೋಜಕ: ಸಿಎಜಿ ವರದಿಯಲ್ಲಿ ಬಹಿರಂಗ

ಮೈಸೂರು ಸಕ್ಕರೆ ಕಾರ್ಖಾನೆಯ ಘಟಕದ ಆಧುನೀಕರಣ

ಜಿ.ಮಹಾಂತೇಶ್ಜಿ.ಮಹಾಂತೇಶ್2 March 2023 8:40 AM IST
share
74 ಕೋಟಿ ರೂ. ವೆಚ್ಚ ಮಾಡಿದ್ದರೂ ನಿಷ್ಪ್ರಯೋಜಕ: ಸಿಎಜಿ ವರದಿಯಲ್ಲಿ ಬಹಿರಂಗ
ಮೈಸೂರು ಸಕ್ಕರೆ ಕಾರ್ಖಾನೆಯ ಘಟಕದ ಆಧುನೀಕರಣ

ಬೆಂಗಳೂರು: ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿನ ಕೋ-ಜನರೇಷನ್ ಘಟಕದ ಆಧುನೀಕರಣಕ್ಕೆ  74 ಕೋಟಿ ರೂ. ವೆಚ್ಚ ಮಾಡಿದ್ದರೂ ಕಾರ್ಯಾರಂಭಗೊಂಡ  ನಂತರವೂ ಅದು ನಿಷ್ಪ್ರಯೋಜಕವಾಗಿತ್ತು. ಹೀಗಾಗಿ 74 ಕೋಟಿ ರೂ.ನಷ್ಟು ಹೂಡಿಕೆ ವ್ಯರ್ಥವಾಗಿತ್ತು ಎಂಬುದನ್ನು ಸಿಎಜಿ ವರದಿಯು ಬಹಿರಂಗಗೊಳಿಸಿದೆ.

ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುಚ್ಛಕ್ತಿ ಕೋ ಜನರೇಷನ್ ಘಟಕವನ್ನು 30 ಮೆಗಾ ವ್ಯಾಟ್ ಸಾಮರ್ಥ್ಯದೊಂದಿಗೆ ಸ್ಥಾಪಿಸಲಾಗಿತ್ತು. ಅದಕ್ಕಾಗಿ ಪ್ರಾಯೋಗಿಕ/ಪರೀಕ್ಷಾರ್ಥ ಕಾರ್ಯಾಚರಣೆಯನ್ನು 2007ರಲ್ಲಿ ನಡೆಸಲಾಗಿತ್ತು. ಇದಕ್ಕಾಗಿ ಕಂಪೆನಿಯು 74.78 ಕೋಟಿ ರೂ.ನಷ್ಟು ವೆಚ್ಚ ಮಾಡಿತ್ತು. ಆದರೆ ಈ ಘಟಕವು ಕಾರ್ಯಾಚರಣೆಯನ್ನೇ ಮಾಡಿರಲಿಲ್ಲ ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

ಈ ಘಟಕವು 5,000 ಟಿಸಿಡಿ ದರದಲ್ಲಿ ಕಚ್ಛಾ ಸಾಮಾಗ್ರಿಯ ಲಭ್ಯತೆ ಇರದ ಕಾರಣ ಅದನ್ನು ಕಾರ್ಯಾರಂಭಗೊಳಿಸಿದ ದಿನದಿಂದಲೂ ನಿಷ್ಪ್ರಯೋಜಕವಾಗಿಯೇ ಇತ್ತು. ಬಿ-ಮಿಲ್ ಕಾರ್ಯ ಸ್ಥಗಿತಗೊಂಡಿದ್ದು ಮತ್ತು ಎ-ಮಿಲ್ ಅದರ ಆಧುನೀಕರಣದ ನಂತರ ಅದರ ಸಾಮರ್ಥ್ಯಕ್ಕೆ ತಕ್ಕಂತೆ ಎಂದಿಗೂ ಕಾರ್ಯನಿರ್ವಹಿಸಿರಲಿಲ್ಲ. ಕೋ ಜನರೇಷನ್ ಘಟಕ ನಡೆಸಲು ಅಗತ್ಯ ಕಚ್ಛಾ ಸಾಮಗ್ರಿಯಯು ಲಭ್ಯವಿರಲಿಲ್ಲ.

‘ಸಹ-ಉತ್ಪಾದನಾ ಸ್ಥಾವರ ಹಾಗೂ ಎ-ಮಿಲ್‌ನ ಆಧುನೀಕರಣಕ್ಕಾಗಿ 123.88 ( ಎ-ಮಿಲ್‌ನ ಆಧುನೀಕರಣಕ್ಕಾಗಿ 49.10 ಕೋಟಿ ರೂ.) ವೆಚ್ಚ ಮಾಡಿತ್ತು. ಅಲ್ಲದೆಯೇ ಕೋ ಜನರೇಷನ್ ಘಟಕ ಸ್ಥಾಪನೆಗೆ ಹುಡ್ಕೋದಿಂದ ಪಡೆದುಕೊಂಡಿದ್ದ ಸಾಲದ ಮೇಲೆ 59.04 ಕೋಟಿ ಮೊತ್ತದಷ್ಟು ಬಡ್ಡಿ ಹೊರೆಯನ್ನು ಕರ್ನಾಟಕ ಸರಕಾರದ ಹೆಗಲಿಗೆ ಬಿದ್ದಿತ್ತು ಎಂದು ಸಿಎಜಿ ವರದಿಯಲ್ಲಿ ಹೇಳಲಾಗಿದೆ.

ಮೈಸೂರು ಸಕ್ಕರೆ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸುವ ಕಡೆಗೆ ರಾಜ್ಯ ಸರಕಾರವು ಕ್ರಮಕೈಗೊಂಡಿತ್ತು. 2021-22ನೇ ಸಾಲಿಗೆ ಕಬ್ಬು ಅರೆಯುವ ಸೀಸನ್‌ನಿಂದ 40 ವರ್ಷಗಳ ಅವಧಿಗೆ ಎಲ್‌ಆರ್‌ಒಟಿ (ಗುತ್ತಿಗೆ, ಪುನರ್ವಸತಿ, ಕಾರ್ಯಾಚರಣೆ ಹಾಗೂ ವರ್ಗಾವಣೆ) ಆಧಾರದ ಮೇಲೆ ತೀರ್ಮಾನ ಕೈಗೊಂಡಿತ್ತು. ಈ ನಿಟ್ಟಿನಲ್ಲಿ 2022ರ ಮೇ ವರೆಗೂ ಹೆಚ್ಚಿನ ಪ್ರಗತಿಯನ್ನೂ ಸಾಧಿಸಿರಲಿಲ್ಲ.

2006-07ರಿಂದಲೂ ಈ ಕಂಪೆನಿಯನ್ನು ರೋಗಗ್ರಸ್ತ ಎಂದು ಘೋಷಿಸಿದ ನಂತರ 2020-21ರವರೆಗೂ ಈಕ್ವಿಟಿ, ಸಾಲ ಹಾಗೂ ಅನುದಾನಗಳ ರೂಪದಲ್ಲಿ 526.51 ಕೋಟಿ ರೂ.ನಷ್ಟು ಹಣಕಾಸನ್ನು ಹೂಡಿಕೆ ಮಾಡಿತ್ತು. 2006-07ರಿಂದ 2020-21ರವರೆಗೆ ಕಂಪೆನಿಯು 31.47 ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ಅರೆದಿತ್ತು. ಇದೇ ಅವಧಿಯಲ್ಲಿ ತನ್ನ ಕಾರ್ಯಾಚರಣೆಗಳಿಂದ 418.13 ಕೋಟಿ ರೂ.ನಷ್ಟು ಅನುಭವಿಸಿತ್ತು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X