ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ: ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ

ಕೊಹಿಮಾ: ಬಿಜೆಪಿ (BJP) ನೇತೃತ್ವದ ಸಮ್ಮಿಶ್ರ ಒಕ್ಕೂಟವು ನಾಗಾಲ್ಯಾಂಡ್‌ನಲ್ಲಿ ಭಾರಿ ಗೆಲುವಿಗೆ ಸಿದ್ಧವಾಗಿದೆ, ಫೆಬ್ರವರಿ 27 ರಂದು ನಡೆದ ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಾರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಗೆಲುವಿನ ಮುನ್ಸೂಚನೆ ನೀಡಿದೆ.
ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) 60 ಕ್ಷೇತ್ರಗಳಲ್ಲಿ 41 ರಲ್ಲಿ ಮುಂದಿದೆ. ನಾಗಾಲ್ಯಾಂಡ್‌ನಲ್ಲಿ ಸರ್ಕಾರ ರಚಿಸಲು 31 ಸ್ಥಾನಗಳು ಸಾಕಾಗುತ್ತದೆ.
ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಐದು ಸ್ಥಾನಗಳಲ್ಲಿ ಮುಂದಿದ್ದು, ಕಾಂಗ್ರೆಸ್ ಕೇವಲ ಒಂದರಲ್ಲಿ ಮುನ್ನಡೆ ಸಾಧಿಸಿದೆ.
ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದದ ಪ್ರಕಾರ ಎನ್‌ಡಿಪಿಪಿ 40 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ, 20 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿದೆ.
ಮುಖ್ಯಮಂತ್ರಿ ನೆಫಿಯು ರಿಯೊ ನೇತೃತ್ವದ ಎನ್‌ಡಿಪಿಪಿ 2018 ರ ಚುನಾವಣೆಯಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಹಿಂದಿನ ಚುನಾವಣೆಯಲ್ಲಿ ಈ ಮೈತ್ರಿಕೂಟವು 30 ಸ್ಥಾನಗಳನ್ನು ಗೆದ್ದಿದ್ದರೆ ಎನ್‌ಪಿಎಫ್ ಪಕ್ಷವು 26 ಸ್ಥಾನಗಳನ್ನು ಗೆದ್ದಿತ್ತು.
ಫೆಬ್ರವರಿ 27 ರಂದು 59 ಸ್ಥಾನಗಳಿಗೆ ಚುನಾವಣೆಗಳು ನಡೆದಿದೆ. ಮೇಘಾಲಯ ಮತ್ತು ತ್ರಿಪುರಾದಲ್ಲೂ ಮತ ಎಣಿಕೆ ನಡೆಯುತ್ತಿದೆ.
ಇದನ್ನೂ ಓದಿ: ಬಿಜೆಪಿಗೆ ಬೆಂಬಲ ನೀಡಿದ್ದೇನೆ, ಅದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ: ಸುಮಲತಾ ಅಂಬರೀಶ್