ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ (ಮಾ.2) ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಇರಲಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ತಿಳಿಸಿದ್ದಾರೆ.
ನಾಳೆ (ಮಾರ್ಚ್ 3) ಮಧ್ಯಾಹ್ನ 12.20 ಗಂಟೆಗೆ ಅವರು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥ ಯಾತ್ರೆಯನ್ನು ಉದ್ಘಾಟಿಸುವರು.
ಬಳಿಕ 1.15 ಗಂಟೆಗೆ ಬಸವಕಲ್ಯಾಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಸಂಜೆ 4.50ಕ್ಕೆ ಅವರು ಆವಟಿಯ ಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ಕೊಡಲಿದ್ದಾರೆ. 5.10ಕ್ಕೆ ದೇವನಹಳ್ಳಿಯಲ್ಲಿ ವಿಜಯ ಸಂಕಲ್ಪ 4ನೇ ರಥ ಯಾತ್ರೆಯನ್ನು ಉದ್ಘಾಟಿಸಿ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ದಿಲ್ಲಿಗೆ ಹಿಂತಿರುಗಲಿದ್ದಾರೆ ಎಂದು ಕೇಶವ್ ಪ್ರಸಾದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





