ಕೊಪ್ಪಳ | ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪರ ಪೋಸ್ಟ್: ಸರ್ಕಾರಿ ಶಾಲೆಯ ಶಿಕ್ಷಕನಿಗೆ ನೋಟಿಸ್

ಕೊಪ್ಪಳ, ಮಾ.2: ಕೊಪ್ಪಳದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ರಾಜಕೀಯ ಪಕ್ಷವೊಂದಕ್ಕೆ ಬೆಂಬಲ ಸೂಚಿಸುವ ಸಂದೇಶ ಹಾಗೂ ವಿಡಿಯೋ ಲಿಂಕ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅವರೀಗ ಸಂಕಷ್ಟ ಎದುರಿಸುವಂತಾಗಿದೆ ಎಂದು The New Indian Express ವರದಿ ಮಾಡಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸರಕಾರಿ ಪ್ರೌಢಶಾಲೆಯ ಸಹಾಯಕ ಶಿಕ್ಷಕ ಸೋಮಶೇಖರ್ ಹರ್ತಿ ಅವರು ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅಡಿಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಡಿಡಿಪಿಐ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಮೂಲಗಳ ಪ್ರಕಾರ, ಹರ್ತಿ ಅವರು ಕೊಪ್ಪಳದ ರಜತ ವೈಭವ ಎಂಬ ವಾಟ್ಸಪ್ ಗ್ರೂಪ್‌ನಲ್ಲಿ "ಕಾಂಗ್ರೆಸ್ ಪಕ್ಷವು 200% ಅಧಿಕಾರಕ್ಕೆ ಬರಲಿದೆ" ಎಂದು ಪೋಸ್ಟ್ ಮಾಡಿದ್ದಾರೆ.ಅದನ್ನು ಹಲವರು ಫಾರ್ವರ್ಡ್ ಮಾಡಿದ್ದಾರೆ.
ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ಅವರು ಡಿಡಿಪಿಐ ಅವರಿಗೆ ಈ ಬಗ್ಗೆ ವಿಚಾರಣೆ ನಡೆಸುವಂತೆ ತಿಳಿಸಿದ್ದಾರೆ. ಅದರಂತೆ ಶಿಕ್ಷಕ ಸೋಮಶೇಖರ್ ಹರ್ತಿ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
Next Story





