Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಘಾಲಯದಲ್ಲಿ ಅತಂತ್ರ ವಿಧಾನಸಭೆ:...

ಮೇಘಾಲಯದಲ್ಲಿ ಅತಂತ್ರ ವಿಧಾನಸಭೆ: ಮುಖ್ಯಮಂತ್ರಿ ಸಂಗ್ಮಾ ಮನವಿ ಬೆನ್ನಿಗೇ ಬೆಂಬಲ ನೀಡಿದ ಅಮಿತ್ ಶಾ

2 March 2023 9:20 PM IST
share
ಮೇಘಾಲಯದಲ್ಲಿ ಅತಂತ್ರ ವಿಧಾನಸಭೆ: ಮುಖ್ಯಮಂತ್ರಿ  ಸಂಗ್ಮಾ ಮನವಿ ಬೆನ್ನಿಗೇ ಬೆಂಬಲ ನೀಡಿದ ಅಮಿತ್ ಶಾ

ಶಿಲ್ಲಾಂಗ್: ಮೇಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶಯಲ್ಲಿ ಬಹುಮತದ ಕೊರತೆ ಅನುಭವಿಸಿದ ಮುಖ್ಯಮಂತ್ರಿ ಕೊನ್ರಾಡ್ ಸಂಗ್ಮಾ, ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿ ಬೆಂಬಲ ಕೋರಿದ ಬೆನ್ನಿಗೇ ಅವರ ಮನವಿಯನ್ನು ಪುರಸ್ಕರಿಸಲಾಗಿದೆ ಎಂದು NDTV ವರದಿ ಮಾಡಿದೆ.

ಗುರುವಾರ ಭಾರಿ ಭದ್ರತೆಯೊಂದಿಗೆ ನಡೆದ ಮತ ಎಣಿಕೆಯಲ್ಲಿ ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿದಂತೆಯೇ ಫಲಿತಾಂಶಗಳು ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸೂಚನೆ ನೀಡಿವೆ. ಕೊನ್ರಾಡ್ ಸಂಗ್ಮಾ ನೇತೃತ್ವದ ಪಕ್ಷವು ಈವರೆಗೆ 20 ಸ್ಥಾನಗಳನ್ನು ಜಯಿಸಿ, 6 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 60 ಸ್ಥಾನಗಳನ್ನು ಹೊಂದಿರುವ ಮೇಘಾಲಯ ವಿಧಾನಸಭೆಯಲ್ಲಿ ಬಹುಮತದ ಸಂಖ್ಯೆ 31 ಆಗಿದೆ. ಈ ಪೈಕಿ ಒಂದು ಮತಕ್ಷೇತ್ರದ ಚುನಾವಣೆ ರದ್ದಾಗಿದ್ದು, ಮುಂದೆ ನಡೆಯಲಿದೆ.

ಯುನೈಟೆೆಡ್ ಡೆಮಾಕ್ರಾಟಿಕ್ ಪಾರ್ಟಿ (UDP) ಎರಡನೆ ಸ್ಥಾನದಲ್ಲಿದ್ದು, 11 ಸ್ಥಾನ ಗಳಿಸಿದೆ. ಇದಲ್ಲದೆ ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ತಲಾ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಎರಡು ಸ್ಥಾನಗಳಲ್ಲಿ ವಿಜಯಿಯಾಗಿದೆ.

ಈಶಾನ್ಯ ರಾಜ್ಯಗಳ ಟ್ರಬಲ್ ಶೂಟರ್ ಆಗಿರುವ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಕಾನ್ರಾಡ್ ಸಂಗ್ಮಾ ಅವರಿಗೆ ಬೆಂಬಲ ನೀಡುವ ನಿರ್ಧಾರವನ್ನು ಪ್ರಕಟಿಸಿದರು. ಹೀಗಿದ್ದೂ ಸಂಗ್ಮಾ ನೇತೃತ್ವದ ಸರ್ಕಾರ ರಚನೆಯಾಗಲು ಮತ್ತಷ್ಟು ಶಾಸಕರ ಬೆಂಬಲ ಬೇಕಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: 1,257 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಗೆಲುವು: 2ನೇ ಬಾರಿ ಮುಖ್ಯಮಂತ್ರಿ ಹುದ್ದೆಯತ್ತ ಮಾಣಿಕ್‌ ಸಹಾ

share
Next Story
X