ಲೋಕಾಯುಕ್ತ ಬೆಲೆಗೆ ಬಿದ್ದ BJP ಶಾಸಕನ ಪುತ್ರ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು, ಮಾ.2: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ (KSDL) ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚ ಪಡೆದ ದಾವಣಗೆರೆಯ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ವಿರೋಧ ಪಕ್ಷ ಕಾಂಗ್ರೆಸ್, 40% ಕಮಿಷನ್ನಿಗೆ ದಾಖಲೆ ಕೊಡಿ ಎನ್ನುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಇಂದು ಲೋಕಾಯುಕ್ತ ದಾಳಿಯಲ್ಲಿ ಕಮಿಷನ್ ಕರ್ಮಕಾಂಡಕ್ಕೆ ದಾಖಲೆ ಸಿಕ್ಕಿತಲ್ಲವೇ? ಇದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಾಕ್ಷಿಯಲ್ಲವೇ? ಈಗ ಭ್ರಷ್ಟಾಚಾರಕ್ಕೆ ಹೊಣೆ ಹೊತ್ತು ರಾಜೀನಾಮೆ ಕೊಡುವಿರಾ? ನಿಮ್ಮದು #40PercentSarkara ಎನ್ನಲು ಇನ್ನೇನು ಬೇಕು? ಎಂದು ಬಿಜೆಪಿಯವರನ್ನು ಪ್ರಶ್ನೆ ಮಾಡಿದೆ.
40% ಕಮಿಷನ್ನಿಗೆ ದಾಖಲೆ ಕೊಡಿ ಎನ್ನುತ್ತಿದ್ದ @BSBommai ಅವರೇ,
— Karnataka Congress (@INCKarnataka) March 2, 2023
ಇಂದು ಲೋಕಾಯುಕ್ತ ದಾಳಿಯಲ್ಲಿ ಕಮಿಷನ್ ಕರ್ಮಕಾಂಡಕ್ಕೆ ದಾಖಲೆ ಸಿಕ್ಕಿತಲ್ಲವೇ? ಇದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಾಕ್ಷಿಯಲ್ಲವೇ?
ಈಗ ಭ್ರಷ್ಟಾಚಾರಕ್ಕೆ ಹೊಣೆ ಹೊತ್ತು ರಾಜೀನಾಮೆ ಕೊಡುವಿರಾ?
ನಿಮ್ಮದು #40PercentSarkara ಎನ್ನಲು ಇನ್ನೇನು ಬೇಕು @BJP4Karnataka?