Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಿಯೊನೆಲ್ ಮೆಸ್ಸಿಯ ಪತ್ನಿ ಕುಟುಂಬಕ್ಕೆ...

ಲಿಯೊನೆಲ್ ಮೆಸ್ಸಿಯ ಪತ್ನಿ ಕುಟುಂಬಕ್ಕೆ ಸೇರಿದ ಸೂಪರ್ ಮಾರ್ಕೆಟ್ ನಲ್ಲಿ ಗುಂಡಿನ ದಾಳಿ, ಬೆದರಿಕೆ

3 March 2023 10:31 AM IST
share
ಲಿಯೊನೆಲ್ ಮೆಸ್ಸಿಯ ಪತ್ನಿ ಕುಟುಂಬಕ್ಕೆ ಸೇರಿದ ಸೂಪರ್ ಮಾರ್ಕೆಟ್ ನಲ್ಲಿ ಗುಂಡಿನ ದಾಳಿ, ಬೆದರಿಕೆ

ರೊಸಾರಿಯೊ( ಅರ್ಜೆಂಟೀನ): ಇಬ್ಬರು ದುಷ್ಮರ್ಮಿಗಳು ಏಳು ಬಾರಿ ಬ್ಯಾಲನ್ ಡಿ'ಓರ್ ವಿಜೇತ ಲಿಯೊನೆಲ್ ಮೆಸ್ಸಿ(Lionel Messi) ಅವರ ಪತ್ನಿಯ ಕುಟುಂಬಕ್ಕೆ ಸೇರಿದ ಮುಚ್ಚಿದ ಸೂಪರ್ ಮಾರ್ಕೆಟ್‌ನಲ್ಲಿ ರಾತ್ರಿಯ ವೇಳೆ ಗುಂಡು ಹಾರಿಸಿದ್ದಾರೆ. ಮೆಸ್ಸಿಯನ್ನು ಗುರಿಯಾಗಿಸಿಕೊಂಡು ಬೆದರಿಕೆಯ ಸಂದೇಶ ನೀಡಿದ್ದಾರೆ.

"ಮೆಸ್ಸಿ, ನಾವು ನಿನಗಾಗಿ ಕಾಯುತ್ತಿದ್ದೇವೆ. ಜಾವ್ಕಿನ್ ಒಬ್ಬ ನಾರ್ಕೊ, ಅವನು ನಿನ್ನನ್ನು ರಕ್ಷಿಸುವುದಿಲ್ಲ," ಎಂದು ಕೈಬರಹದ ಬೆದರಿಕೆ ಸಂದೇಶವನ್ನು ಬಿಟ್ಟುಹೋಗಿರುವ ದುಷ್ಕರ್ಮಿಗಳು ಗುರುವಾರ ಬೆಳಗ್ಗೆ  ಸೂಪರ್ ಮಾರುಕಟ್ಟೆಯ ಮುಂಭಾಗಕ್ಕೆ 14 ಗುಂಡುಗಳನ್ನು ಹೊಡೆದಿದ್ದಾರೆ.

ಪಾಬ್ಲೊ ಜಾವ್ಕಿನ್ ಅವರು ಮೆಸ್ಸಿಯ ತವರು ರೊಸಾರಿಯೊದ ಮೇಯರ್ ಆಗಿದ್ದಾರೆ, ಬ್ಯೂನಸ್ ಐರಿಸ್‌ನಿಂದ ವಾಯುವ್ಯಕ್ಕೆ 320 ಕಿಲೋಮೀಟರ್ ದೂರದಲ್ಲಿ  ಸೂಪರ್ ಮಾರ್ಕೆಟ್ ಇದೆ,

ಫುಟ್ಬಾಲ್ ಸೂಪರ್‌ಸ್ಟಾರ್‌ ಮೆಸ್ಸಿಯ ಪತ್ನಿ  ಆಂಟೊನೆಲಾ ರೊಕುಝೊ ಅವರ ಕುಟುಂಬಕ್ಕೆ ಸೂಪರ್‌ಮಾರ್ಕೆಟ್ ಸೇರಿದೆ ಎಂದು ಜಾವ್ಕಿನ್ ದೃಢಪಡಿಸಿದರು. ‘’ನಗರದಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸುವುದು" ದಾಳಿಯ ಗುರಿಯಾಗಿದೆ ಎಂದು ಹೇಳಿದರು.

ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಬಂದಿರುವುದನ್ನು ಪ್ರತ್ಯಕ್ಷದರ್ಶಿಗಳು ದೃಢಪಡಿಸಿದರು. ಅವರಲ್ಲಿ ಒಬ್ಬರು ಇಳಿದು ಗುಂಡು ಹಾರಿಸಿ, ನೋಟು ಬೀಳಿಸಿದ. ಬಳಿಕ  ಇಬ್ಬರೂ ಓಡಿಹೋಗಿದ್ದಾರೆ..

share
Next Story
X