ಚನ್ನಗಿರಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಮನೆ ಮೇಲೆ ಲೋಕಾಯುಕ್ತ ದಾಳಿ

ದಾವಣಗೆರೆ, ಮಾ.3: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣದ ತನಿಖೆಯನ್ನು ಮತ್ತಷ್ಟು ವಿಸ್ತರಿಸಿರುವ ಲೋಕಾಯುಕ್ತ ಪೊಲೀಸರು ತಾಲೂಕಿನ ಚನ್ನೇಶಪುರ(ಮಾಡಾಳ್) ಗ್ರಾಮದಲ್ಲಿರುವ ಶಾಸಕ ವಿರೂಪಾಕ್ಷಪ್ಪರ ಮನೆಯಲ್ಲೂ ಶೋಧ ನಡೆಸಿದ್ದಾರೆ.
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲೂಎಸ್ಎಸ್ ಇಲಾಖೆಯ ಮುಖ್ಯ ಲೆಕ್ಕ ಪರಿಶೋಧಕ ಪ್ರಶಾಂತ್ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಗುರುವಾರ ತಾಲೂಕಿನ ಚನ್ನೇಶಪುರ(ಮಾಡಾಳ್) ಗ್ರಾಮದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಶೋಧ ನಡೆಸಿದರು.
ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಅಧಿಕಾರಿಗಳು ಮನೆಯನ್ನಿಡೀ ಶೋಧ ನಡೆಸಿ 4 ಬ್ಯಾಗ್‌ಗಳಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಸಂಗ್ರಹಿಸಿದ್ದಾರೆ.
ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಪ್ರಶಾಂತ್ ಮಾಡಾಳ್ ಮನೆಯಿಂದ ಆರು ಕೋಟಿ ರೂ. ನಗದು ವಶ
Next Story