Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರಾಶ್ರಿತರೂ ಮನುಷ್ಯರೇ, ಅವರನ್ನು...

ನಿರಾಶ್ರಿತರೂ ಮನುಷ್ಯರೇ, ಅವರನ್ನು ನಗರದಿಂದ ಹೊರಹಾಕಬೇಕೆಂದು ಬಯಸುತ್ತೀರ?: ಬಾಂಬೆ ಹೈಕೋರ್ಟ್‌

3 March 2023 6:17 PM IST
share
ನಿರಾಶ್ರಿತರೂ ಮನುಷ್ಯರೇ, ಅವರನ್ನು ನಗರದಿಂದ ಹೊರಹಾಕಬೇಕೆಂದು ಬಯಸುತ್ತೀರ?: ಬಾಂಬೆ ಹೈಕೋರ್ಟ್‌

ಮುಂಬೈ: ನಿರಾಶ್ರಿತತೆ ಜಾಗತಿಕ ಸಮಸ್ಯೆ, ಫುಟ್‌ಪಾತ್‌ಗಳಲ್ಲಿ ವಾಸಿಸುವ ನಿರಾಶ್ರಿತರು ಕೂಡಾ ಇತರರಂತೆ ಮನುಷ್ಯರು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಅದೇ ವೇಳೆ, ದಕ್ಷಿಣ ಮುಂಬೈಯ ಫುಟ್‌ಪಾತ್‌ಗಳಲ್ಲಿ ವಾಸಿಸುವ ನಿರಾಶ್ರಿತರ ವಿರುದ್ಧ ಕ್ರಮ ಕೈಗೊಳ್ಳುವ ಆದೇಶವನ್ನು ನೀಡಲು ಹೈಕೋರ್ಟ್ ನಿರಾಕರಿಸಿತು.

ನಗರದ ಫುಟ್‌ಪಾತ್‌ ಮತ್ತು ಪಾದಚಾರಿ ಮಾರ್ಗಗಳಲ್ಲಿ ನೆಲೆಸಿರುವ ಅನಧಿಕೃತ ಮಾರಾಟಗಾರರು ಮತ್ತು ಬೀದಿ ಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿರುವ ಕುರಿತು ಹೈಕೋರ್ಟ್‌ನಲ್ಲಿ ಸ್ವಯಂ ಪ್ರೇರಿತವಾಗಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ವಿಚಾರಣೆ ಮಾಡುತ್ತಿದೆ.

ಬಾಂಬೆ ಬಾರ್ ಅಸೋಸಿಯೇಷನ್ ಸಲ್ಲಿಸಿದ ಅರ್ಜಿಯಲ್ಲಿ ದಕ್ಷಿಣ ಮುಂಬೈನ ಫೌಂಟೇನ್ ಪ್ರದೇಶದ ಬಳಿ ಫುಟ್‌ಪಾತ್‌ಗಳಲ್ಲಿ ಅನೇಕ ಜನರು ವಾಸಿಸುತ್ತಿದ್ದಾರೆ  ಎಂದು ಹೇಳಲಾಗಿದೆ. ಇದರ ವಿರುದ್ಧ ಕ್ರಮಕ್ಕಾಗಿ ನಗರ ಪೊಲೀಸರು ಮತ್ತು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಗೂ ಪತ್ರ ಬರೆಯಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಇಂತಹ ಪ್ರಕರಣಗಳಲ್ಲಿ ಯಾವ ನ್ಯಾಯಾಂಗ ಆದೇಶ ನೀಡಬಹುದು ಎಂದು ಪೀಠ ಪ್ರಶ್ನಿಸಿದೆ.

"ನಗರದಿಂದ ಬಡವರನ್ನು ತೊಲಗಿಸಬೇಕು ಎಂದು ನೀವು ಹೇಳುತ್ತಿದ್ದೀರಾ? ಇವರು ಇತರ ನಗರಗಳಿಂದ ಅವಕಾಶಗಳನ್ನು ಹುಡುಕಿಕೊಂಡು ಇಲ್ಲಿಗೆ ಬಂದವರು, ವಸತಿರಹಿತರು ಜಾಗತಿಕ ಸಮಸ್ಯೆ" ಎಂದು ನ್ಯಾಯಾಲಯ ಹೇಳಿದೆ.

"ಅವರು (ಮನೆಯಿಲ್ಲದ ವ್ಯಕ್ತಿಗಳು) ಸಹ ಮನುಷ್ಯರು. ಅವರು ಬಡವರಾಗಿರಬಹುದು ಅಥವಾ ಕಡಿಮೆ ಅದೃಷ್ಟವಂತರಾಗಿರಬಹುದು, ಆದರೆ ಅವರು ಕೂಡಾ ಮನುಷ್ಯರು, ನ್ಯಾಯಾಲಯದ ಮುಂದೆ ಅವರು ಎಲ್ಲರಂತೆ ಮನುಷ್ಯರು." ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಫುಟ್‌ಪಾತ್‌ನಲ್ಲಿ ವಾಸಿಸುವ ಇಂತಹ ವ್ಯಕ್ತಿಗಳಿಗೆ ರಾತ್ರಿ ಆಶ್ರಯವನ್ನು ಒದಗಿಸಬೇಕು ಎಂದು ಬಾರ್‌ ಕೌನ್ಸಿಲ್ ವಕೀಲ ಮಿಲಿಂದ್ ಸಾಠೆ ಸಲಹೆ ನೀಡಿದರು. ಇದು ಅಧಿಕಾರಿಗಳು ಪರಿಗಣಿಸಬಹುದಾದ ಪರಿಹಾರವಾಗಿದೆ ಎಂದು ಪೀಠ ಹೇಳಿತು.

ಅಂತಹ ಸವಾಲುಗಳಿಗೆ ಬಿಎಂಸಿಗೆ ಸ್ಥಳದಲ್ಲೇ ನಿರ್ಮಾಣವನ್ನು ಪ್ರಾರಂಭಿಸುವುದು ಅಥವಾ ಮೆಟ್ರೋ ನಿಲ್ದಾಣವನ್ನು ನಿರ್ಮಿಸುವುದು ಸುಲಭವಾದ ಪರಿಹಾರವಾಗಿದೆ ಎಂದು ನ್ಯಾಯಾಲಯವು ವ್ಯಂಗ್ಯವಾಗಿ ಹೇಳಿದೆ. ಆದಾಗ್ಯೂ, ಅರ್ಜಿಯಲ್ಲಿ ಎತ್ತಿದ ಕಳವಳ ಪ್ರತ್ಯೇಕವಾಗಿದೆ. ಸ್ವಯಂ ಪ್ರೇರಿತ ಅರ್ಜಿಯು ವ್ಯಾಪಾರಿಗಳು ಮತ್ತು ಮಾರಾಟಗಾರರ ಸಮಸ್ಯೆಗಳಿಗೆ ಸಂಬಂಧಿಸಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ.

ವಸತಿ ರಹಿತರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತ್ಯೇಕ ಅರ್ಜಿ ಅಥವಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಸಂಘವು ಪರಿಗಣಿಸಲಿದೆ ಎಂದು ಸಾಠೆ ಹೇಳಿದರು. ಇದಕ್ಕೆ ಸಮ್ಮತಿಸಿದ ಕೋರ್ಟ್, ಪ್ರತ್ಯೇಕ ಅರ್ಜಿ ಅಥವಾ ಪಿಐಎಲ್ ಸಲ್ಲಿಸಿದರೆ ಅಗತ್ಯ ಸೂಚನೆಗಳನ್ನು ನೀಡಬಹುದು ಎಂದು ಹೇಳಿದೆ.

share
Next Story
X