ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿಶ್ವ ಶ್ರವಣ ದಿನಾಚರಣೆ

ಉಡುಪಿ, ಮಾ.3: ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮರಣಾರ್ಥ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂದು ವಿಶ್ವ ಶ್ರಣ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಾಜಗೋಪಾಲ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ರಾಮರಾವ್, ಜಿಲ್ಲಾ ಆಸ್ಪತ್ರೆಯ ಕಿವಿ, ಗಂಟಲು ತಜ್ಞ ಡಾ.ಮುರಳೀಧರ ಪಾಟೀಲ್, ಆಡಿಯೋಲಾಜಿಸ್ಟ್ ದಿಶಾ ಕಾರ್ನಾಡ್ ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಹೆಚ್ ಸ್ವಾಗತಿಸಿ, ವಂದಿಸಿದರು, ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್ ಶಾಮೀಕ್ಷ ರಾವ್ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಶ್ರವಣ ದಿನದ ಪ್ರಯುಕ್ತ ಶ್ರವಣ ದೋಷದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಕ್ರಮದ ಅಂಗವಾಗಿ ನಗರದ ಬೋರ್ಡ್ ಹೈಸ್ಕೂಲ್‌ನಿಂದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮರಣಾರ್ಥ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯವರೆಗೆ ಜಾಥಾ ನಡೆಯಿತು.
ಜಾಥಾದಲ್ಲಿ ನ್ಯೂ ಸಿಟಿ ಕಾಲೇಜ್ ಆಫ್ ನಸಿರ್ಂಗ್‌ನ ವಿದ್ಯಾರ್ಥಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
