Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಎಫ್‍ಐಆರ್ ದಾಖಲು; ಬಂಧನ ಸಾಧ್ಯತೆ

ಪ್ರಶಾಂತ್ ಸಹಿತ 5 ಮಂದಿಗೆ 14 ದಿನ ನ್ಯಾಯಾಂಗ ಬಂಧನ

3 March 2023 8:53 PM IST
share
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಎಫ್‍ಐಆರ್ ದಾಖಲು; ಬಂಧನ ಸಾಧ್ಯತೆ
ಪ್ರಶಾಂತ್ ಸಹಿತ 5 ಮಂದಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಲೋಕಾಯುಕ್ತ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕರೂ ಆಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ(ಕೆಎಸ್‍ಡಿಎಲ್) ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಬಿಡಬ್ಲ್ಯೂಎಸ್‍ಎಸ್‍ಬಿ ಆರ್ಥಿಕ ಸಲಹೆಗಾರ ಮತ್ತು ಸಿಇಒ ಪ್ರಶಾಂತ್ ಮಾಡಾಳ್ ಸೇರಿದಂತೆ ಆರು ಮಂದಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿದ್ದು, ಮಾಡಾಳ್ ವಿರೂಪಾಕ್ಷಪ್ಪರನ್ನು ಶೀಘ್ರವೇ ಬಂಧಿಸುವ ಸಾಧ್ಯತೆಗಳಿವೆ.

ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಮುಖ ಆರೋಪಿಯಾಗಿದ್ದು, ಅವರ ಪುತ್ರ ಪ್ರಶಾಂತ್ ಮಾಡಾಳ್ ಎರಡನೇ ಆರೋಪಿ, ಲೆಕ್ಕಾಧಿಕಾರಿ ಸುರೇಂದ್ರ, ಮಾಡಾಳ್ ಸಂಬಂಧಿ ಸಿದ್ದೇಶ್, ಕರ್ನಾಟಕ ಅರೋಮಾಸ್ ಕಂಪೆನಿಯ ಸಿಬ್ಬಂದಿಗಳಾದ ಲಂಚದ ಹಣ ನೀಡಲು ಬಂದಿದ್ದ ಆಲ್ಬರ್ಟ್ ನಿಕೋಲಾ, ಗಂಗಾಧರ್ ಅವರು ಕ್ರಮವಾಗಿ ಮೂರು, ನಾಲ್ಕು, ಐದು ಮತ್ತು ಆರನೇ ಆರೋಪಿಗಳಾಗಿದ್ದಾರೆ ಎಂದು ತಿಳಿಸಲಾಗಿದೆ.

ಬೆಂಗಳೂರಿನ ಕ್ರಸೆಂಟ್ ರಸ್ತೆಯಲ್ಲಿನ ಶಾಸಕರ ಕಚೇರಿಯಲ್ಲಿ ರಾಸಾಯನಿಕ ಪೂರೈಕೆ ಟೆಂಡರ್ ಗುತ್ತಿಗೆ ನೀಡಲು ಬರೋಬ್ಬರಿ 1.20ಕೋಟಿ ರೂ.ಮೊತ್ತದ ಲಂಚದ ಬೇಡಿಕೆ ಇಟ್ಟಿದ್ದು, ಮಾತುಕತೆ ಬಳಿಕ 81ಲಕ್ಷ ರೂ.ಗಳಿಗೆ ಒಪ್ಪಿಕೊಂಡಿದ್ದ. 40 ಲಕ್ಷ ರೂ.ಲಂಚದ ಮುಂಗಡ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದ. ಆತನಿದ್ದ ಕಚೇರಿ ಪರಿಶೀಲನೆ ವೇಳೆ 2.02 ಕೋಟಿ ರೂ.ನಗದು ಪತ್ತೆಯಾಗಿತ್ತು. ಆ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಅವರ ಸಂಜಯನಗರ ನಿವಾಸ ಸೇರಿದಂತೆ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಒಟ್ಟು 6,10,30,000 ರೂ. ನಗದು ಪತ್ತೆಯಾಗಿದೆ. ಒಟ್ಟಾರೆ 8 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ನಗದು ಹಾಗೂ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ನಿನ್ನೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಸೇರಿ ಐದು ಮಂದಿಯನ್ನು ನಗರದಲ್ಲಿನ ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಪ್ರಶಾಂತ್ ಮಾಡಾಳ್ ಸಹಿತ ಐವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿದ್ದಾರೆ.

ರಾಜೀನಾಮೆ: ಈ ಮಧ್ಯೆ ಕೆಎಸ್‍ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಮಾಡಾಳ್ ವಿರೂಪಾಕ್ಷಪ್ಪ, ‘ಮಾ.2ರ ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಷಡ್ಯಂತ್ರವಾಗಿರುತ್ತದೆ. ಅದಾಗಿಯೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. 

ಸರಕಾರ ವಜಾಕ್ಕೆ ಮನವಿ: ಈ ನಡುವೆ ಕೆಎಸ್‍ಡಿಎಲ್ ಅಧ್ಯಕ್ಷರೂ ಆಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಲಂಚ ಸ್ವೀಕಾರ ಮಾಡುವ ವೇಳೆ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದು, ಕೂಡಲೇ ಭ್ರಷ್ಟ ಬಿಜೆಪಿ ಸರಕಾರವನ್ನು ವಜಾ ಮಾಡಬೇಕೆಂದು ಕೋರಿ ಪ್ರತಿಪಕ್ಷ ಕಾಂಗ್ರೆಸ್, ರಾಜ್ಯಪಾಲರಿಗೆ ಮನವಿ ಮಾಡಿದೆ.
ಮುಂದಿನ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಆಡಳಿತರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಅಬ್ಬರದ ಪ್ರಚಾರದ ಅಖಾಡಕ್ಕಿಳಿದಿರುವ ಸಂದರ್ಭದಲ್ಲೇ ಬಿಜೆಪಿ ಶಾಸಕರ ಪುತ್ರ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದು, ಈ ವಿಚಾರ ರಾಜಕೀಯ ಮುಖಂಡರ ನಡುವಿನ ಆರೋಪ- ಪ್ರತ್ಯಾರೋಪಕ್ಕೆ ಆಹಾರವೂ ಆಗಿದೆ.

ಅಕ್ರಮ ದಾರಿ ಹಿಡಿಯಬೇಡಿ: ‘ಕಾನೂನಿನ ಮುಂದೆ ಶಾಸಕರೇ ಆಗಲಿ, ಜನಸಾಮಾನ್ಯ ಅಥವಾ ಅಧಿಕಾರಿ ಎಂಬ ಯಾವುದೇ ಬೇಧವಿಲ್ಲ, ಎಲ್ಲರೂ ಒಂದೇ. ಕಾನೂನಾತ್ಮಕವಾಗಿ ಏನು ಶಿಕ್ಷೆ ಆಗಬೇಕೋ ಅದು ಯಾರಿದ್ದರೂ ಆಗಿಯೇ ಆಗುತ್ತದೆ. ತನಿಖಾ ಹಂತದಲ್ಲಿ ಪ್ರಕರಣದ ವಿವರಣೆ ನೀಡಲು ಸಾಧ್ಯವಿಲ್ಲ. ನಮ್ಮ ಸಿಬ್ಬಂದಿಗೆ ಆ ಬಗ್ಗೆ ನನ್ನ ನಿರ್ದೇಶನದ ಅಗತ್ಯವೂ ಇಲ್ಲ’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ದಾಳಿಯ ವೇಳೆ ಒಟ್ಟು 8 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ನಗದನ್ನು ವಶಪಡಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಯಾರೇ ಬಂದು ದೂರು ನೀಡಿದರೂ, ಸಿಬ್ಬಂದಿ ಚಾಕಚಕ್ಯತೆಯಿಂದ ಕಾರ್ಯಾಚರಣೆ ಕೈಗೊಂಡು ಕಾನೂನು ರೀತಿಯಲ್ಲಿ ಕ್ರಮ ವಹಿಸಲಿದ್ದಾರೆ. ಲಂಚಕ್ಕೆ ಬೇಡಿಕೆಯಿಡುವವನು ಎಂದಿದ್ದರೂ ಸಿಗಲೇಬೇಕು. ಆದರೆ, ಸಾರ್ವಜನಿಕರು ಶೋಷಣೆಗೆ ಒಳಗಾಗಬೇಕಿಲ್ಲ. ಕಾನೂನಾತ್ಮಕ ಕೆಲಸಕ್ಕೆ ಅಕ್ರಮ, ಅಡ್ಡದಾರಿ ಹಿಡಿಯಬೇಕಿಲ್ಲ. ಲೋಕಾಯುಕ್ತ ಸಂಸ್ಥೆ ಸಹಾಯ ಪಡೆಯಲು, ದೂರು ನೀಡಿ, ಭ್ರಷ್ಟಾಚಾರ ನಿಗ್ರಹಕ್ಕೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

‘ಅಮಿತ್ ಶಾ, ಜೆ.ಪಿ.ನಡ್ಡಾ ಅವರು ಶೇ.40-50ರಷ್ಟು ಕಮಿಷನ್ ಹೆಚ್ಚಳಕ್ಕೆ ಲಂಚ ಸಂಕಲ್ಪ ಯಾತ್ರೆ, ಭ್ರಷ್ಟೋತ್ಸವಕ್ಕಾಗಿ ರಾಜ್ಯಕ್ಕೆ ಬರುತ್ತಿದ್ದಾರೆ! ಲೋಕಾಯುಕ್ತ ದಾಳಿಯಲ್ಲಿ ಬಿಜೆಪಿ ಶಾಸಕರ ಕಚೇರಿ, ಮನೆಯಲ್ಲಿ 8 ಕೋಟಿ ರೂ.ಗಳಷ್ಟು ಅಕ್ರಮ ಹಣ ಸಿಕ್ಕಿದೆ. ಇಷ್ಟೊಂದು ಹಣ ಎಲ್ಲಿಂದ ಬರುತ್ತಿದೆ? ನಾವು ಪೇ ಸಿಎಂ, ಶೇ.40ರಷ್ಟು ಕಮಿಷನ್ ಸರಕಾರ ಎಂದಿದ್ದು ತಪ್ಪೇ?. ಬಿಜೆಪಿ ಸರಕಾರದಲ್ಲಿ ವಿಧಾನಸೌಧ ವ್ಯಾಪಾರ ಸೌಧವಾಗಿದೆ ಎಂದು ನಾವು ಹೇಳುತ್ತಲೇ ಇದ್ದೆವು. ಈ ಬಗ್ಗೆ ಸಾಕ್ಷಿ ಏನಿದೆ ಎಂದು ಸರಕಾರ ನಮ್ಮ ಆರೋಪ ತಿರಸ್ಕರಿಸುತ್ತಾ ಬಂದಿತ್ತು. ಈಗ ರಾಜ್ಯದ ಶೇ.40 ಸರಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರ ಎಂಬುದು ನಿನ್ನೆಯ ಲೋಕಾಯುಕ್ತ ದಾಳಿಯಿಂದ ಸಾಬೀತಾಗಿದೆ’
-ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ

share
Next Story
X