ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ 'ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ'

ಪುತ್ತೂರು, ಮಾ.4: ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ 'ಪೂವರಿ' ತುಳು ಮಾಸಿಕ ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸೇವೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ - 2023ರ 'ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ'ಯನ್ನು ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಡಕೊಂಡಿದೆ.
ತುಳು ಭಾಷೆಯ ಏಕೈಕ ತುಳು ಮಾಸಿಕ 'ಪೂವರಿ' ಪತ್ರಿಕೆಗೆ ಇತ್ತೀಚೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಒಡಿಯೂರು ತುಳು ಸಾಹಿತ್ಯ ಸಮ್ಮೇಳನದ ಪ್ರಶಸ್ತಿ ಸಹಿತ ಅನೇಕ ಮಾಧ್ಯಮ ಪ್ರಶಸ್ತಿಗಳು ಲಭಿಸಿವೆ.
Next Story