Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಕೆಮ್ಮು, ಜ್ವರದ ಹಲವಾರು...

ದೇಶದಲ್ಲಿ ಕೆಮ್ಮು, ಜ್ವರದ ಹಲವಾರು ಪ್ರಕರಣಗಳಿಗೆ Influenza A ವೈರಸ್ ಕಾರಣ: ಐಸಿಎಂಆರ್

ವಿವೇಚನೆಯಿಲ್ಲದೆ ಆ್ಯಂಟಿಬಯಾಟಿಕ್ ಗಳ ಬಳಕೆಯ ವಿರುದ್ಧ IMA ಎಚ್ಚರಿಕೆ

4 March 2023 3:30 PM IST
share
ದೇಶದಲ್ಲಿ ಕೆಮ್ಮು, ಜ್ವರದ ಹಲವಾರು ಪ್ರಕರಣಗಳಿಗೆ Influenza A ವೈರಸ್ ಕಾರಣ: ಐಸಿಎಂಆರ್
ವಿವೇಚನೆಯಿಲ್ಲದೆ ಆ್ಯಂಟಿಬಯಾಟಿಕ್ ಗಳ ಬಳಕೆಯ ವಿರುದ್ಧ IMA ಎಚ್ಚರಿಕೆ

ಹೊಸದಿಲ್ಲಿ: ಕಳೆದ 2-3 ತಿಂಗಳುಗಳಿಂದ ಭಾರತದಲ್ಲಿ ಕಾಣಿಸಿಕೊಂಡಿರುವ, ಕೆಲವೊಮ್ಮೆ ಜ್ವರದ ಜೊತೆಗೆ ನಿರಂತರ ಕೆಮ್ಮಿನ ಪ್ರಕರಣಗಳಿಗೆ ಇನ್ಫ್ಲುಯೆಂಜಾ ಎ ಸಬ್ಟೈಪ್ ಎಚ್3ಎನ್2 (Influenza A subtype H3N2) ವೈರಸ್ ಕಾರಣವಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ಯ ತಜ್ಞರು ಹೇಳಿದ್ದಾರೆ.

ಕಳೆದ 2-3 ತಿಂಗಳುಗಳಿಂದ ವ್ಯಾಪಕವಾಗಿ ಹರಿದಾಡುತ್ತಿರುವ ಎಚ್3ಎನ್2 ಇತರ ಯಾವುದೇ ಸಬ್ಟೈಪ್ಗಳಿಗಿಂತ ಹೆಚ್ಚಿನ ರೋಗಿಗಳು ಆಸ್ಪತ್ರೆಗೆ ದಾಖಲಾಗಲು ಕಾರಣವಾಗುತ್ತಿದೆ ಎಂದು ತಿಳಿಸಿರುವ ತಜ್ಞರು, ವೈರಸ್ ಸೋಂಕಿನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಜನರು ವಹಿಸಬೇಕಾದ ಮುಂಜಾಗ್ರತೆಗಳನ್ನು ಸೂಚಿಸಿದ್ದಾರೆ.
ಇನ್ನೊಂದೆಡೆ, ದೇಶಾದ್ಯಂತ ಹೆಚ್ಚುತ್ತಿರುವ ಕೆಮ್ಮು, ಶೀತ ಮತ್ತು ವಾಕರಿಕೆ ಪ್ರಕರಣಗಳ ನಡುವೆ ವಿವೇಚನೆಯಿಲ್ಲದೆ ಆ್ಯಂಟಿಬಯಾಟಿಕ್ ಗಳ ಬಳಕೆಯ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ)ವು ಎಚ್ಚರಿಕೆ ನೀಡಿದೆ.

ಜ್ವರವು ಮೂರು ದಿನಗಳ ಬಳಿಕ ಇರುವುದಿಲ್ಲ,ಆದರೆ ಕೆಮ್ಮು ಮೂರು ವಾರಗಳವರೆಗೆ ಮುಂದುವರಿಯಬಹುದು ಎಂದು ಐಎಂಎ ತಿಳಿಸಿದೆ.

ವಾಯುಮಾಲಿನ್ಯದಿಂದಾಗಿಯೂ ವೈರಸ್ ನ ಪ್ರಕರಣಗಳು ಹೆಚ್ಚಾಗಿವೆ ಎಂದು ತಿಳಿಸಿರುವ ಅದು, ಈ ಪ್ರಕರಣಗಳು ಹೆಚ್ಚಾಗಿ 15 ವರ್ಷಕ್ಕಿಂತ ಕೆಳಗಿನ ಮತ್ತು 50 ವರ್ಷಕ್ಕಿಂತ ಮೇಲಿನ ಜನರಲ್ಲಿ ಕಾಣಿಸಿಕೊಳ್ಳುತ್ತವೆ. ಜ್ವರದೊಂದಿಗೆ ಸೈನಸ್ ಗಳು ಮತ್ತು ಗಂಟಲು ಸೇರಿದಂತೆ ಉಸಿರಾಟ ವ್ಯವಸ್ಥೆಯ ಮೇಲ್ಭಾಗ ಸೋಂಕಿಗೆ ತುತ್ತಾಗುತ್ತದೆ ಎಂದಿದೆ.
ರೋಗಲಕ್ಷಣಗಳಿಗೆ ಮಾತ್ರ ಚಿಕಿತ್ಸೆಯನ್ನು ಶಿಫಾರಸು ಮಾಡುವಂತೆ ಮತ್ತು ಆ್ಯಂಟಿಬಯಾಟಿಕ್ಗಳನ್ನು ನೀಡದಂತೆ ಐಎಂಎ ವೈದ್ಯರಿಗೆ ಸೂಚಿಸಿದೆ.

ಜ್ವರ, ಕೆಮ್ಮು ಎಂದ ತಕ್ಷಣ ಜನರು ಅಝಿಥ್ರೋಮೈಸಿನ್ ಮತ್ತು ಅಮೊಕ್ಸಿಕ್ಲಾವ್ನಂತಹ ಆ್ಯಂಟಿಬಯಾಟಿಕ್ ಗಳನ್ನು ತೆಗೆದುಕೊಳ್ಳಲು ಆರಂಭಿಸುತ್ತಾರೆ. ಇದಕ್ಕಾಗಿ ಅವರು ವೈದ್ಯರ ಸಲಹೆಯನ್ನೂ ಪಡೆಯುವುದಿಲ್ಲ. ಸ್ಥಿತಿ ಉತ್ತಮವಾಗಿದೆ ಎಂದು ಅನ್ನಿಸಿದಾಗ ಆ್ಯಂಟಿಬಯಾಟಿಕ್ಗಳ ಸೇವನೆಯನ್ನು ನಿಲ್ಲಿಸುತ್ತಾರೆ. ಇದು ಆ್ಯಂಟಿಬಯಾಟಿಕ್ ಪ್ರತಿರೋಧಕತೆಗೆ ಕಾರಣವಾಗುವುದರಿಂದ ಇಂತಹ ಪ್ರವೃತ್ತಿಗೆ ಕಡಿವಾಣ ಹಾಕುವ ಅಗತ್ಯವಿದೆ. ಏಕೆಂದರೆ ನಿಜವಾಗಿಯೂ ಆ್ಯಂಟಿಬಯಾಟಿಕ್ಗಳ ಅಗತ್ಯವಿದ್ದಾಗ ಪ್ರತಿರೋಧಕತೆಯಿಂದ ಅವು ಕೆಲಸ  ಮಾಡುವುದಿಲ್ಲ ಎಂದು ಐಎಂಎ ಹೇಳಿಕೆಯಲ್ಲಿ ತಿಳಿಸಿದೆ.

share
Next Story
X