ಡಾ.ಜಗಜೀವನರಾಮ, ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಜಗಜೀವನರಾಮ್ ಅವರ ೧೧೬ನೇ ಹಾಗೂ ಡಾ.ಅಂಬೇಡ್ಕರ್‌ರ ೧೩೨ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ/ಜಾತಿ ಮತ್ತು ಪ/ಪಂಗಡದ ವರ ಶ್ರೇಯಸ್ಸಿಗಾಗಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅಭ್ಯರ್ಥಿಗಳನ್ನು ಗುರುತಿಸಿ ಡಾ.ಜಗಜೀವನರಾಮ್ ಹಾಗೂ ಡಾ. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಿಂದ ಪಡೆದುಕೊಂಡು ಮಾರ್ಚ್ 18ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಡುಪಿಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





