Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.6ರಿಂದ ಮುಡಾದಿಂದ ಮನೆ ನಿವೇಶನೆಗಳ...

ಮಾ.6ರಿಂದ ಮುಡಾದಿಂದ ಮನೆ ನಿವೇಶನೆಗಳ ಹಂಚಿಕೆಗೆ ಅರ್ಜಿಗಳ ವಿತರಣೆ : ರವಿಶಂಕರ ಮಿಜಾರ್

4 March 2023 10:48 PM IST
share
ಮಾ.6ರಿಂದ ಮುಡಾದಿಂದ ಮನೆ ನಿವೇಶನೆಗಳ ಹಂಚಿಕೆಗೆ ಅರ್ಜಿಗಳ ವಿತರಣೆ : ರವಿಶಂಕರ ಮಿಜಾರ್

ಮಂಗಳೂರು, ಮಾ.5:  ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವತಿಯಿಂದ ಮಂಗಳೂರು ತಾಲೂಕಿನ ಕುಂಜತ್ತಬೈಲ್‌ನ ಬಡಾವಣೆಯಲ್ಲಿ ಮನೆ ನಿವೇಶನಗಳು  ಸಿದ್ಧವಾಗಿದ್ದು , ಹಂಚಿಕೆಗಾಗಿ ಅರ್ಜಿಗಳನ್ನು ಮಾ. 6ರಿಂದ ವಿತರಿಸಲಾಗುವುದು ಎಂದು ಮುಡಾದ ಅಧ್ಯಕ್ಷ ರವಿಶಂಕರ ಮಿಜಾರ್ ತಿಳಿಸಿದ್ದಾರೆ.

ಮೂಡಾದ ಕಚೇರಿಯಲ್ಲಿ ಶನಿವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಪ್ರಿಲ್ 6ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇರುತ್ತದೆ.  ಅರ್ಜಿ ಸಲ್ಲಿಸಿ ಒಂದು ತಿಂಗಳ  ಒಳಗಾಗಿ  ನಿವೇಶನದ ಮೌಲ್ಯದ ಶೇ 10 ಶೇಕಡಾ ಮೊತ್ತ ಪಾವತಿಸಿದವರಿಗೆ ಮನೆ ನಿವೇಶನಗಳನ್ನು ಹಂಚಲಾಗುವುದು ಎಂದು ವಿವರಿಸಿದರು.

ಸಾರ್ವಜನಿಕರಿಗೆ ಶೇ. 50, ಇತರೆ ಹಿಂದುಳಿದ ವರ್ಗದವರಿಗೆ ಶೇ 10, ಅನುಸೂಚಿತ ಬುಡಕಟ್ಟುಗಳಿಗೆ ಶೇ. 3, ಅನುಸೂಚಿತ ಜಾತಿಗಳಿಗೆ ಶೇ. 15, ಮಾಜಿ ಸೈನಿಕರು ಅಥವಾ ಮೃತ ಸೈನಿಕರ ಕುಟುಂಬದವರು ಮತ್ತು ಕೇಂದ್ರೀಯ ಸಶಸ್ತ್ರ ಪಡೆಯವರಿಗೆ ಶೇ. 5, ಸರಕಾರ , ಸಾರ್ವಜನಿಕ  ವಲಯದ ಉದ್ದಿಮೆ, ಪ್ರಾಧಿಕಾರಗಳ ನೌಕರರಿಗೆ ಶೇ. 2, ಸಾಧಕರಿಗೆ ಶೇ. 5, ಅಂಗವಿಕಲರಿಗೆ ಶೇ 3 ಮೀಸಲಾತಿ ಇದೆ ಎಂದು ಅವರು ತಿಳಿಸಿದರು.

ಕನಿಷ್ಠ 5 ವರ್ಷ ಕರ್ನಾಟಕದ ನಿವಾಸಿಗಳಾಗಿರಬೇಕು: ನಿವೇಶನಕ್ಕೆ ಅರ್ಜಿ ಸಲ್ಲಿಸುವವರು ಕರ್ನಾಟಕದಲ್ಲಿ ಕನಿಷ್ಠ 5 ವರ್ಷಗಳ ಕಾಲ  ವಾಸವಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರಿಗೆ ಮೀಸಲಾತಿ ಇದ್ದು 6*9 ಮೀಟರ್ ಅಳತೆಯ ನಿವೇಶನ ಆರ್ಥಿಕ ದುರ್ಬಲ ವರ್ಗದವರಿಗೆ ಮಾತ್ರ ನೀಡಲಾಗುವುದು ಎಂದು ರವಿಶಂಕರ ಮಿಜಾರ್ ವಿವರಿಸಿದರು.

ಬ್ಯಾಂಕ್ ಆಫ್ ಬರೋಡದ ವಿಸ್ತೃತ ಕೌಂಟರ್ : 12 ವರ್ಷಗಳ ಬಳಿಕ ನಿಮನೆ ನಿವೇಶನಗಳ ಹಂಚಿಕೆ ಮಾಡಲಾಗುತ್ತಿದ್ದು, ನಿವೇಶನಗಳ ಅರ್ಜಿ ಪಡೆದುಕೊಳ್ಳಲು ಮತ್ತು ಶುಲ್ಕ ತುಂಬಲು ಮೂಡ ಆವರಣದಲ್ಲಿರುವ ಬ್ಯಾಂಕ್ ಆಫ್ ಬರೋಡದ ವಿಸ್ತೃತ ಶಾಖೆಯನ್ನು ಮುಡಾ ಕಚೇರಿಯಲ್ಲಿ ತೆರೆಯಲಾಗಿದೆ. ಇದಕ್ಕಾಗಿ ಪ್ರಾಧಿಕಾರದ ಮತ್ತು ಬ್ಯಾಂಕ್‌ನ ಸಿಬ್ಬಂದಿಯನ್ನು ಇಲ್ಲಿ ನಿಯೋಜಿಸಲಾಗಿದೆ. ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ಬ್ಯಾಂಕ್ ಆಫ್ ಬರೋಡದ ಒಟ್ಟು 25 ಶಾಖೆಗಳಲ್ಲಿ ಅರ್ಜಿ ಪಡೆಯಲು ಮತ್ತು ಶುಲ್ಕ ತುಂಬಲು ವ್ಯವಸ್ಥೆ ಮಾಡಲಾಗಿದೆ ಎಂದು ರವಿಶಂಕರ ಮಿಜಾರು ಮಾಹಿತಿ ನೀಡಿದರು.

ಮನೆ ನಿವೇಶನಕ್ಕಾಗಿ ಅರ್ಜಿಗಳು ಸಿಗುವ  ಬ್ಯಾಂಕ್ ಶಾಖೆಗಳು: ಮಂಗಳೂರಿನ ಅಶೋಕ ನಗರ, ಶರವು ದೇವಸ್ಥಾನ ಬಳಿ, ಜ್ಯೋತಿ ವೃತ್ತ, ಭವಂತಿ ಸ್ಟ್ರೀಟ್, ಬಿಜೈ, ಬೋಂದೆಲ್, ಅಳಪೆ, ಅಳಕೆ, ಬೆಂದೂರು, ಕೂಳೂರು, ಜೆಪ್ಪು, ಫಳ್ನೀರ್, ಪಂಪ್‌ವೆಲ್ ಪಣಂಬೂರು, ಸುರತ್ಕಲ್, ಉಳ್ಳಾಲ, ತಲಪಾಡಿ, ಮೂಡುಬಿದಿರೆ, ಮುಲ್ಕಿ, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ಸುಬ್ರಹ್ಮಣ್ಯ.

ಕೊಣಾಜೆ, ಚೇಳ್ಯಾರ್‌ನಲ್ಲಿ  ಬಡಾವಣೆ: ಕೊಣಾಜೆಯಲ್ಲಿ ನಿರ್ಮಿಸಿರುವ ಬಡಾವಣೆಯ ನಿವೇಶನಗಳ ಹಂಚಿಕೆ 15 ದಿನಗಳಲ್ಲಿ ಆರಂಭವಾಗಲಿದೆ. ಅಲ್ಲಿ  112 ನಿವೇಶನಗಳು ಲಭ್ಯವಾಗಲಿದೆ. ಚೇಳ್ಯಾರಿನಲ್ಲಿ ಸಿದ್ಧವಾಗಲಿರುವ ಬಡಾವಣೆಯ ಭೂಮಿ ಪೂಜೆ ಕೆಲವೇ ದಿನಗಳಲ್ಲಿ ನಡೆಯಲಿದೆ ಎಂದು ಮಿಜಾರ್ ತಿಳಿಸಿದರು.

share
Next Story
X