ಬೆಂಗಳೂರು: ಪೊಲೀಸರು ಜಪ್ತಿ ಮಾಡಿದ್ದ 20ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಗಳೂರು, ಮಾ.5: ಇಲ್ಲಿನ ಕೋಡಿಗೆಹಳ್ಳಿ ಪೊಲೀಸ್ ಠಾಣಾ ಆವರಣದಲ್ಲಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಜಪ್ತಿ ಮಾಡಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ರವಿವಾರ ನಡೆದಿದೆ.
ವಿವಿಧ ಅಪರಾಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ದ್ವಿಚಕ್ರ ವಾಹನಗಳನ್ನು ಠಾಣೆ ಮುಂಭಾಗದ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು ಮಧ್ಯಾಹ್ನ 1.30 ಸುಮಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಜ್ವಾಲೆ ಹೆಚ್ಚಾಗಿ ನೋಡು ನೋಡುತ್ತಿದ್ದಂತೆ ಬೈಕ್‍ಗಳುಸಂಪೂರ್ಣವಾಗಿ ಸುಟ್ಟುಹೋಗಿವೆ. ಘಟನೆಸಂಬಂಧ ಅಗ್ನಿಶಾಮಕದಳಮಾಹಿತಿ ಆಧರಿಸಿಸ್ಥಳಕ್ಕೆಬಂದುಬೆಂಕಿ ನಂದಿಸಿದ್ದು, ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Next Story