Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯಲ್ಲಿ ಹೆಚ್ಚುತ್ತಿರುವ...

ದ.ಕ.ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ : ಸೂಕ್ತ ಕ್ರಮಕ್ಕೆ ಡಿಸಿ‌ ರವಿಕುಮಾರ್ ನಿರ್ದೇಶನ

5 March 2023 9:58 PM IST
share
ದ.ಕ.ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ : ಸೂಕ್ತ ಕ್ರಮಕ್ಕೆ ಡಿಸಿ‌ ರವಿಕುಮಾರ್ ನಿರ್ದೇಶನ

ಮಂಗಳೂರು, ಮಾ.5: ದ.ಕ.ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿದ್ದು, ಅಗತ್ಯ ಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ನಿರ್ದೇಶನ ನೀಡಿದ್ದಾರೆ.

ಈ ಬೇಸಿಗೆಯಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಅಧೀನಕ್ಕೊಳಪಟ್ಟ ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ಹೊರಡಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳಿಗೂ ಶುದ್ಧ ಕುಡಿಯುವ ನೀರನ್ನು ಕೊಡಬೇಕು. ಆದಷ್ಟು ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ತಿಳಿಸಬೇಕು.

ವಿದ್ಯಾರ್ಥಿ ನಿಲಯಗಳ ಅಡುಗೆ ಕೋಣೆಯನ್ನು ಮತ್ತು ಅಡುಗೆಗೆ ಬಳಸುವ ಪಾತ್ರೆ, ಪರಿಕರಗಳನ್ನು ಸ್ವಚ್ಛವಾಗಿಟ್ಟುಕೊಂಡಿರಬೇಕು. ಅಡುಗೆ ತಯಾರಿಸುವವರು ಮತ್ತು ಆಹಾರ ಬಡಿಸುವವರು ಕೈಗಳ ಶುಚಿತ್ವ ಸೇರಿದಂತೆ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು.

ಪ್ರತಿ 6 ತಿಂಗಳಿಗೊಮ್ಮೆ ಅಡುಗೆ ಕೋಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಮತ್ತು ಆಹಾರ ತಯಾರಕರ ಆರೋಗ್ಯ ತಪಾಸಣೆಯನ್ನು ನಡೆಸಬೇಕು.

ವಿದ್ಯಾರ್ಥಿ ನಿಲಯಗಳಿಗೆ ವಿವಿಧ ಮೂಲಗಳಿಂದ ಸರಬರಾಜು ಆಗುವ ನೀರಿನ ಮಾದರಿಯನ್ನು ಪ್ರತೀ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿ, ಕುಡಿಯಲು ಮತ್ತು ಅಡುಗೆ ತಯಾರಿಕೆಗೆ ಸುರಕ್ಷಿತ ನೀರನ್ನು ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು.

ವಿದ್ಯಾರ್ಥಿ ನಿಲಯಗಳ ಶೌಚಾಲಯ, ಸ್ನಾನದ ಕೋಣೆಯನ್ನು ಸ್ವಚ್ಚವಾಗಿಡಬೇಕು.

ಬೇಸಿಗೆ ಸಂದರ್ಭ ಆಹಾರ ಪದಾರ್ಥಗಳು ಬೇಗನೆ ಕೆಡುವ ಸಾಧ್ಯತೆ ಇರುವುದರಿಂದ, ಈ ಬಗ್ಗೆ ಗಮನಹರಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಬಿಸಿಯಾದ ಸುರಕ್ಷಿತ ಆಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು.

ವಿದ್ಯಾರ್ಥಿ ನಿಲಯಗಳ ಶೌಚಾಲಯ, ಸ್ನಾನದ ಕೋಣೆಯನ್ನು ಸ್ವಚ್ಛವಾಗಿಡಬೇಕು.

ಬೇಸಿಗೆ ಸಂದರ್ಭದಲ್ಲಿ ನಿರ್ಜಲೀಕರಣ (Dehydration) ಆಗುವ ಸಾಧ್ಯತೆ ಇರುವುದರಿಂದ, ಬಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೂ ಮಾಹಿತಿ ನೀಡಿ ಎಲ್ಲರೂ ಶುದ್ಧ ನೀರು, ದ್ರವ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವಂತೆ ಜಾಗೃತಿ ವಹಿಸಬೇಕು.

ಅಡುಗೆ ಕೋಣೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪ್ರತಿದಿನ ಸೂಕ್ತ ರೀತಿಯಲ್ಲಿ ವಿಲೇವಾರಿ ನಡೆಸಬೇಕು.
ಯಾವುದಾದರೂ ವಿದ್ಯಾರ್ಥಿಗೆ ಅನಾರೋಗ್ಯ ಕಂಡುಬಂದಲ್ಲಿ ಕೂಡಲೇ ವೈದ್ಯಾಧಿಕಾರಿ, ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಬೇಕು.

ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

share
Next Story
X