ಚಿಕ್ಕಮಗಳೂರು | ಶಾಲಾ ಪ್ರವಾಸ ತೆರಳುತ್ತಿದ್ದ ವಾಹನ ಪಲ್ಟಿ: 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಚಿಕ್ಕಮಗಳೂರು, ಮಾ.6: ಶಾಲಾ ವಿದ್ಯಾರ್ಥಿಗಳಿದ್ದ ವಾಹನ ಹಾಗೂ ಕಾರೊಂದರ ನಡುವೆ ಸಂಭವಿಸಿದ ಅಪಘಾತ(Accident)ದಲ್ಲಿ 10 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ರವಿವಾರ ತಡರಾತ್ರಿ ನಡೆದಿದೆ.
ಗಾಯಾಳುಗಳು ಕಲಬುರಗಿ ಜಿಲ್ಲೆಯ ಅಫ್ಝಲ್ ಪುರ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.
ಶಿಕ್ಷಕರೊಂದಿಗೆ ಶೈಕ್ಷಣಿಕ ಪ್ರವಾಸ ಬಂದಿದ್ದ ಈ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಡರಾತ್ರಿ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಕಾರು ನಡುವೆ ಢಿಕ್ಕಿ ಉಂಟಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಉರುಳಿಬಿದ್ದಿದೆ. ಇದರಿಂದ ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಅಜ್ಜಂಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





