ಮದ್ಯ ನೀತಿ ಪ್ರಕರಣ: ದಿಲ್ಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ

ಹೊಸದಿಲ್ಲಿ: ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದಿಲ್ಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ ವಿಶೇಷ ನ್ಯಾಯಾಲಯವು ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಸಿಸೋಡಿಯಾ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗುವುದು ಎಂದು NDTV ವರದಿ ಮಾಡಿದೆ.
ಸಿಬಿಐ ಕಸ್ಟಡಿ ಅಂತ್ಯಗೊಂಡ ಬಳಿಕ ಇಂದು ಮಧ್ಯಾಹ್ನ ಸಿಸೋಡಿಯಾ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರ ಬಂಧನದ ನಂತರ ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿತ್ತು. ಶನಿವಾರ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರು ಸಿಸೋಡಿಯಾ ಅವರನ್ನು ಇನ್ನೂ ಎರಡು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದ್ದರು.
ಆಪ್ ನ ಎರಡನೇ ಪ್ರಮುಖ ನಾಯಕನಾಗಿರುವ ಸಿಸೋಡಿಯಾ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರ ಮನವಿಯನ್ನು ಈಗ ಶುಕ್ರವಾರ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
Next Story





