Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸುಸ್ಥಿತಿಯಲ್ಲಿರುವ ರಸ್ತೆ ಅಗೆಯುವುದಕ್ಕೆ...

ಸುಸ್ಥಿತಿಯಲ್ಲಿರುವ ರಸ್ತೆ ಅಗೆಯುವುದಕ್ಕೆ ವಿರೋಧ: ಜೆಸಿಬಿ ಮುಂದೆ ರಸ್ತೆಯಲ್ಲೇ ಕುಳಿತು ನಿತ್ಯಾನಂದ ಒಳಕಾಡು ಪ್ರತಿಭಟನೆ

6 March 2023 3:13 PM IST
share
ಸುಸ್ಥಿತಿಯಲ್ಲಿರುವ ರಸ್ತೆ ಅಗೆಯುವುದಕ್ಕೆ ವಿರೋಧ: ಜೆಸಿಬಿ ಮುಂದೆ ರಸ್ತೆಯಲ್ಲೇ ಕುಳಿತು ನಿತ್ಯಾನಂದ ಒಳಕಾಡು ಪ್ರತಿಭಟನೆ

ಉಡುಪಿ, ಮಾ.6: ನಗರದ ಕುಂಜಿಬೆಟ್ಟು ಶಾರದಾ ಮಂಟಪದಿಂದ ಬೀಡಿನ ಗುಡ್ಡೆವರೆಗಿನ ಸುಸ್ಥಿತಿಯಲ್ಲಿರುವ ರಸ್ತೆಯನ್ನು ಅಗೆದು ಕಾಂಕ್ರೀಟೀಕರಣ ಮಾಡುತ್ತಿರುವುದಾಗಿ ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ, ನಗರಸಭೆ ಮಾಜಿ ಸದಸ್ಯ ನಿತ್ಯಾನಂದ ಒಳಕಾಡು ಸೋಮವಾರ ಜೆಸಿಬಿಗೆ ಅಡ್ಡವಾಗಿ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಸ್ಥಳೀಯ ನಗರಸಭೆ ಬಿಜೆಪಿ ಸದಸ್ಯ ಗಿರೀಶ್ ಅಂಚನ್ ಹಾಗೂ ನಿತ್ಯಾನಂದ ವಳಕಾಡು ನಡುವೆ ಕೆಲಕಾಲ ವಾಗ್ವಾದಗಳು ನಡೆದವು. ಐದು ದಿನಗಳಿಂದ ಕಾಂಕ್ರಿಟ್ ರಸ್ತೆಯನ್ನು ಅಗೆಯುತ್ತಿದ್ದು ಇದಕ್ಕೆ ನಿತ್ಯಾನಂದ ಒಳಕಾಡು ಎರಡು ದಿನಗಳ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ನಗರ ಸಭೆಯ ಅಧಿಕಾರಿಗಳನ್ನು ಈ ಕುರಿತಾಗಿ ಗಮನ ಸೆಳೆಯಲಾಗಿತ್ತು. ಸದೃಢವಾಗಿರುವ ರಸ್ತೆಯನ್ನು ಅಗೆದು ಮರು ಕಾಂಕ್ರೀಟೀಕರಣ ಮಾಡುವುದು ಸರಿಯಲ್ಲ. ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ. ಇದೊಂದು ದುಂದು ವೆಚ್ಚದ ಕಾಮಗಾರಿ ಎಂದು ನಿತ್ಯಾನಂದ ಒಳಕಾಡು ಆರೋಪಿಸಿದರು.

 27 ವರ್ಷಗಳ ಹಿಂದಿನ ಕಾಂಕ್ರಿಟ್ ರಸ್ತೆ ಗುಣಮಟ್ಟ ಕಳೆದುಕೊಂಡಿದೆ. ಹೆದ್ದಾರಿಯಿಂದ ಶಾರದಾ ಮಂಟಪವರೆಗೆ ಈಗಾಗಲೇ ಹೊಸ ರಸ್ತೆ ನಿರ್ಮಾಣವಾಗಿದೆ. ಒಳಚರಂಡಿ ನಿರ್ಮಾಣ ಮಾಡುವ ಸಂದರ್ಭ ಅಲ್ಲಲ್ಲಿ ರಸ್ತೆ ಹಾಳಾಗಿದ್ದು ಹೊಸ ರಸ್ತೆ ನಿರ್ಮಾಣ ಆಗಬೇಕಾಗಿದೆ ಎಂಬದು ನಗರಸಭಾ ಸದಸ್ಯ ಗಿರೀಶ್ ಅಂಚನ್ ಕಾಮಗಾರಿಯನ್ನು ಸಮರ್ಥಿಸಿಕೊಂಡರು.

 ಅಲ್ಲಿ ನೆರೆದ ಸ್ಥಳೀಯರು, ಹೊಸ ರಸ್ತೆಯನ್ನು ನಮಗೆ ನಿರ್ಮಾಣ ಮಾಡಿ ಕೊಡಿ. ಹಳೆಯ ರಸ್ತೆ ಮತ್ತು ಹೊಸ ರಸ್ತೆ ಅಗಲ ಎತ್ತರ ವ್ಯತ್ಯಾಸ ಬರುತ್ತದೆ. ಮುಂದೆ ಮಳೆಗಾಲದಲ್ಲಿ ಹೊಂಡ ಬೀಳುವ ಸಾಧ್ಯತೆ ಇದೆ ಎಂದು ದೂರಿದರು.

ಈ ಬಗ್ಗೆ ನಿತ್ಯಾನಂದ ಒಳಕಾಡು ನಗರಸಭೆ ಕಮಿಷನರ್ ಗಮನ ಸೆಳೆದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸದ್ಯಕ್ಕೆ ಕಾಂಕ್ರಿಟ್ ರಸ್ತೆ ಅಗೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

share
Next Story
X