ಹೋಳಿ ಹುಣ್ಣಿಮೆ ಹಬ್ಬ: ಮಾ.7ರಂದು ವಿಶೇಷ ಸ್ಥಳೀಯ ರಜೆ ಘೋಷಣೆ

ಉಡುಪಿ : ಉಡುಪಿ ಮತ್ತು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಹೋಳಿ ಹುಣ್ಣಿಮೆ ಹಬ್ಬವನ್ನು ವಿಶೇಷವಾಗಿ ಆಚರಿಸುವ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಮಾ.7ರಂದು ವಿಶೇಷ ಸ್ಥಳೀಯ ರಜೆಯನ್ನು ಘೋಷಿಸಲಾಗಿದೆ.
ಜಿಲ್ಲಾಧಿಕಾರಿಗಳ ಸೂಚನೆಯಂತೆ ಉಡುಪಿ ಮತ್ತು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಶಾಲೆಗಳಲ್ಲಿ ಹೋಳಿ ಹುಣ್ಣಿಮೆ ಹಬ್ಬವನ್ನು ವಿಶೇಷವಾಗಿ ಆಚರಿಸುವ ಪ್ರದೇಶ ವ್ಯಾಪ್ತಿಯ ಶಾಲಾ ವಿದ್ಯಾರ್ಥಿ ಗಳಿಗೆ ನಿಯಮಾನುಸಾರ ವಿಶೇಷ ಸ್ಥಳೀಯ ರಜೆಯನ್ನು ನೀಡಲು ಸೂಕ್ತ ಕ್ರಮ ವಹಿಸಬೇಕು ಎಂದು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.
Next Story