ಯೆನೆಪೋಯ ವತಿಯಿಂದ ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ ಸಂಗೀತ ಕಾರ್ಯಕ್ರಮ

ಮಂಗಳೂರು: ಯೆನೆಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ಜುಲೇಖಾ ಯೆನೆಪೋಯ ಆಂಕೊಲಾಜಿ ಘಟಕದ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ಭರವಸೆಯ ಕಿರಣವಾಗಿ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಡಾ.ಅಂಬೇಡ್ಕರ್ ಭವನದಲ್ಲಿ ಸಂಗೀತ ಕಾರ್ಯಕ್ರಮನ್ನು ನಡೆಯಿತು.
ಯೆನೆಪೋಯ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಅಬ್ದುಲ್ಲ ಕುಂಞಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿ.ಪಿ.ಸಿ ಕರ್ನಾಟಕದ ಆದಾಯ ತೆರಿಗೆ ಆಯುಕ್ತೆ ಎಚ್.ಎಲ್.ಸೌಮ್ಯಾ ಆಚಾರ್ ಮತ್ತು ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟ್ಟಿಟ್ಯೂಟ್ ಆಫ್ ಆಂಕೊಲಾಜಿಯ ನಿರ್ದೇಶಕ ಡಾ.ವಿ.ಲೋಕೇಶ್ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಎಮ್‌ಎಸ್‌ಎಮ್‌ಇನ ಉಪ ನಿರ್ದೇಶಕ ಆರ್.ಗೋಪಿನಾಥ್, ಎ.ಜೆ ಆಸ್ಪತ್ರೆಯ ಆಂಕೊಲಾಜಿಸ್ಟ್ ಡಾ.ಶೇಖರ್ ಪಾಟೀಲ್, ದಿ ವೀಕ್ ಮ್ಯಾಗಜೀನ್‌ನ ಮಾಜಿ ಸಂಪಾದಕ-ಮುಖ್ಯಸ್ಥ ಟಿ.ಆರ್.ಗೋಪಾಲಕೃಷ್ಣನ್, ಯೆನೆಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ.ಕೆ.ಎಸ್.ಗಂಗಾಧರ ಸೋಮಯಾಜಿ, ಯೆನೆಪೋಯ ಡೀಮ್ಡ್ ವಿಶ್ವವಿದ್ಯಾಲಯದ ಸರ್ಜಿಕಲ್ ಆಂಕೊಲಾಜಿ ವಿಭಾಗದ ಎಚ್‌ಒಡಿ ಡಾ.ಜಲಾಲುದ್ದೀನ್ ಅಕ್ಬರ್ ಉಪಸ್ಥಿತರಿದ್ದರು.
ಯೆನೆಪೋಯ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ವಿಜಯಕುಮಾರ್ ಕ್ಯಾನ್ಸರ್ ಅಂಶಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಯೆನೆಪೊಯ ಆಂಕೊಲಾಜಿ ಸಂಸ್ಥೆಯ ಕುರಿತು ಯೆನೆಪೊಯ ಡೀಮ್ಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ಹಾಗೂ ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಶೇಟ್ ಮಾಹಿತಿ ನೀಡಿದರು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪ್ರದರ್ಶನಗಳಿದ್ದವು. ನಾಗರಾಜ ಕೋಟೆ ಅವರಿಂದ ಸ್ಟ್ಯಾಂಡಪ್ ಕಾಮಿಡಿ, ಡಾ.ಸಜೀವ್ ನಾಯರ್ ಅವರಿಂದ ಪ್ರೇರಕ ಭಾಷಣ, ಸಂಗೀತ ಸಂಜೆ, ಏಕವ್ಯಕ್ತಿ ನೃತ್ಯ ಮತ್ತು ಶಾಸ್ತ್ರೀಯ ನೃತ್ಯ ಕಾರ್ಯಕ್ರಮಗಳು ಜರುಗಿತು. ಈ ಸಂದರ್ಭ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







