ಮಾ.7: ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ದ.ಕ.ಜಿಲ್ಲಾ ಪ್ರವಾಸ

ಮಂಗಳೂರು, ಮಾ.6: ಉನ್ನತ ಶಿಕ್ಷಣ, ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಶ್ವತ್ಥ್ ನಾರಾಯಣ ಸಿ.ಎನ್. ಅವರು ಮಾ.7ರಂದು ದ.ಕ.ಜಿಲ್ಲಾ ಪ್ರವಾಸದಲ್ಲಿರುತ್ತಾರೆ.
ಬೆಳಗ್ಗೆ 8ಕ್ಕೆ ಕೈಕಂಬದ ಬಿಳಿನೆಲೆ ಗ್ರಾಮದ ಗೋಪಾಲಕೃಷ್ಣ ಪ್ರೌಢಶಾಲೆಯ ಮೈದಾನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸುವರು. 8:05ಕ್ಕೆ ಬಿಳಿನೆಲೆ ಗ್ರಾಮದಿಂದ ನಿರ್ಗಮಿಸಿ 8:15ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. ಮಧ್ಯಾಹ್ನ 1:15ಕ್ಕೆ ಕೈಕಂಬದಲ್ಲಿರುವ ಗೋಪಾಲಕೃಷ್ಣ ಪ್ರೌಢಶಾಲಾ ಮೈದಾನದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





