Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆಧುನಿಕತೆಯ ಪರಿವರ್ತನೆ ಕೊರಗರ...

ಆಧುನಿಕತೆಯ ಪರಿವರ್ತನೆ ಕೊರಗರ ಅಸ್ತಿತ್ವಕ್ಕೆ ಅಪಾಯ: ಬಾಬು ಕೊರಗ

6 March 2023 2:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಧುನಿಕತೆಯ ಪರಿವರ್ತನೆ ಕೊರಗರ ಅಸ್ತಿತ್ವಕ್ಕೆ ಅಪಾಯ: ಬಾಬು ಕೊರಗ

ಶಿರ್ವ : ಆಧುನಿಕತೆಯ ಪರಿವರ್ತನೆಯ ಗಾಳಿಯಿಂದ ಕೊರಗ ಸಮಾಜದ ಭಾಷೆ, ಸಂಸ್ಕೃತಿ, ಕುಲಕಸುಬು ನಶಿಸುವುದರೊಂದಿಗೆ ಕೊರಗರ ಅಸ್ತಿತ್ವ ಇಲ್ಲವಾಗುವ ಕಾಲ ಸನ್ನಿಹಿತವಾಗುತ್ತಿದೆ. ಕೊರಗರು ಈ ನೆಲದ ಮಕ್ಕ ಳಾಗಿದ್ದು, ಅವರ ಭಾಷೆ, ಸಂಸ್ಕೃತಿ, ಪರಂಪರೆ ಉಳಿಸುವ ನಿಟ್ಟಿನಲ್ಲಿ ಸಮಾಜದ ಇತಿಹಾಸ ವನ್ನು ಯುವಕರು ದಾಖಲಿಸಿಕೊಂಡು ಸಮುದಾಯ ಅಸ್ತಿತ್ವದಲ್ಲಿದೆ ಎಂಬುದನ್ನು ಜಗತ್ತಿಗೆ ಸಾರಬೇಕಾಗಿದೆ ಎಂದು ಕೊರಗ ಸಮುದಾಯದ ಹಿರಿಯ ಸಂಘಟಕ, ಸಾಹಿತಿ ಪಾಂಗಾಳ ಬಾಬು ಕೊರಗ ಹೇಳಿದ್ದಾರೆ.

ಬೆಳ್ಳೆ ಗ್ರಾಮ ಪಂಚಾಯತ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕ ಮತ್ತು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮುಂಚಿಕಾಡು (ಪಾಂಬೂರು) ಕೊರಗರ ಬಲೆಪುವಿ ನಲ್ಲಿ ರವಿವಾರ ನಡೆದ ಕೊರ್ರೆನ ಕೊರಲ್- ಕೊರಗರ ನೆಲಮೂಲ ಪರಂಪರೆ, ಭಾಷೆಯ ಹೊಳಹು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊರ್ರೆರ್ ಈ ಞಲತ ಕುಚೇರ್ಲು(ಕೊರಗರು ಈ ನೆಲದ ಮಕ್ಕಳು) ಕುರಿತು ಉಪನ್ಯಾಸ ನೀಡಿದರು.

ಪಾಂಗಾಳ ಕೊರಗರ ಬಲೆಪುವಿನ ಗುರಿಕಾರ ವಸಂತ ಕೊಳಲು ವಾದನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಂಚಿಕಾಡು (ಪಾಂಬೂರು) ಕೊರಗರ ಬಲೆಪುವಿನ ಕಮಲ ಮತ್ತು ಸುಂದರ ಟಿ.ತೀಪೆ ಪಟ್ನದು ಜೇನು ನೀಡಿ ಜೇನ ಹಬ್ಬ ನೆರವೇರಿಸಿದರು.

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕೊರಗ ಜನಾಂಗದ ಭಾಷೆ ಕಣ್ಮರೆಯಾಗುವುದರಂದಿಗೆ ಸಂಸ್ಕೃತಿಯ ಬೇರುಗಳು ಸಡಿಲವಾಗು ತ್ತಿವೆ. ಅಳಿವಿನಂಚಿನಲ್ಲಿರುವ ಭಾಷೆಯನ್ನು ಉಳಿಸಿಕೊಳ್ಳುವುದರ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಬೇಕಾ ಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಸಂಘಟಕ, ಸಾಹಿತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾಂಗಾಳ ಬಾಬು ಕೊರಗ ಅವರನ್ನು ಸಮ್ಮಾನಿಸಲಾಯಿತು. ಬೆಳ್ಳೆ ಗ್ರಾಪಂ ಅಧ್ಯಕ್ಷ  ಸುಧಾಕರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ದರು. ಕಸಾಪ ಜಿಲ್ಲಾ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಬೆಳ್ಳೆ ಗ್ರಾಪಂ ಸದಸ್ಯೆ ಅಮಿತಾ ವೇದಿಕೆಯಲ್ಲಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಕಾಪು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಳ್ಳೆ ಗ್ರಾಪಂ ಸದಸ್ಯರಾದ ಹರೀಶ್ ಶೆಟ್ಟಿ, ರಾಜೇಂದ್ರ ಶೆಟ್ಟಿ, ಸಂತೋಷ್ ಕುಲಾಲ್, ಸಾಹಿತಿ ರಿಚರ್ಡ್ ದಾಂತಿ, ನ್ಯಾಯವಾದಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಪ್ರಕಾಶ್ ನೊರೊನ್ಹಾ ಪಾಂಬೂರು, ಶ್ರೀರಾಮ ದಿವಾಣ, ಬೆಳ್ಳೆ ಗ್ರಾಪಂ ಲೆಕ್ಕಾಧಿಕಾರಿ ಸದಾನಂದ ಪೂಜಾರಿ, ಕಸಾಪ ಕಾಪು ಘಟಕದ ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ಸದಸ್ಯರಾದ ದೇವದಾಸ್ ಪಾಟ್ಕರ್ ಮುದರಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಬೆಳ್ಳೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುಧಾಕರ ಶೆಟ್ಟಿ ಸ್ವಾಗತಿಸಿದರು. ಕಸಾಪ ಕಾರ್ಯದರ್ಶಿ ಶಿಕ್ಷಕ ನೀಲಾನಂದ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಕಸಾಪ ಕಾರ್ಯದರ್ಶಿ ಹಾಗೂ ಕಾರ್ಯಕ್ರಮ ಸಂಯೋಜಕ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ವಂದಿಸಿದರು.

ಜಾನಪದ ಪರಂಪರೆಯ ಪ್ರಾತಿಕ್ಷಿಕೆ

ಕೊರಗರ ಜಾನಪದ ಪರಂಪರೆಯಲ್ಲಿ ಹಾಸು ಹೊಕ್ಕಾದ ವಿವಿಧ ಪ್ರಾತಿಕ್ಷಿಕೆ ಕಾರ್ಯಕ್ರಮದಲ್ಲಿ ಕೊರ್ರೆನ ಪಾಟು-ಕೊರಗರ ಹಾಡು, ಜಾನಪದ ಪರಂಪರೆಯ ಪಾಡ್ದಾನಗಳನ್ನು ಪ್ರಸ್ತುತ ಪಡಿಸಲಾಯಿತು.

ಕೊರ್ರೆನ ಕೊನ್ಕೆ -ಕೊರಗರ ನೃತ್ಯ, ತುಳು ನೃತ್ಯ, ಸಾಪ್ರದಾಯಿಕ ಡೋಲು ಕುಣಿತ, ವಿವಾಹದ ಮುನ್ನಾದಿನ ಮನೆಯಂಗಳದಲ್ಲಿ ವಾಡಿಕೆಯಂತೆ ಕುಟುಂಬ ಸಪರಿವಾರದವರು ಡೋಲು ಸಹಿತ ಇತರ ಪರಿಕರಕಗಳ ವಾದನದಲ್ಲಿ ನಲಿದು ಕುಪ್ಪಳಿಸುವ ನೃತ್ಯ, ಅರಕಜಬ್ಬೆನ ಕಥಾವಾಚನ ನಡೆಯಿತು. ಅನಾದಿ ಕಾಲ ದಿಂದಲೂ ಪರಂಪರಾಗತವಾಗಿ ಬಂದ ಕುಲಕಸುಬುಗಳಾದ ಚಟಿಕುರೆ, ಕುರೆ, ಕಡ್ಡಯಿ, ಕೊರಲ್, ಬಲ್ಲ್ ತಯಾರಿಕೆಯ ಪ್ರಾತಿಕ್ಷಿಕೆ ಜೊತೆಗೆ ವೈವಿಧ್ಯಮಯ ಕಾರ್ಯಕ್ರಮಗಳು ಜರುಗಿದವು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X