Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾವೂರು: ಜನವಸತಿ ಪ್ರದೇಶದಲ್ಲಿ ಸಿಮೆಂಟ್...

ನಾವೂರು: ಜನವಸತಿ ಪ್ರದೇಶದಲ್ಲಿ ಸಿಮೆಂಟ್ ಮಿಶ್ರಣ ಘಟಕ ಕಾರ್ಯಾಚರಣೆ

ಸೂಕ್ತ ಕ್ರಮಕ್ಕೆ ಆಗ್ರಹಿಸಿ ಅಗ್ರಾಹಾರ ಬೀದಿ ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

6 March 2023 10:15 PM IST
share
ನಾವೂರು: ಜನವಸತಿ ಪ್ರದೇಶದಲ್ಲಿ ಸಿಮೆಂಟ್ ಮಿಶ್ರಣ ಘಟಕ ಕಾರ್ಯಾಚರಣೆ
ಸೂಕ್ತ ಕ್ರಮಕ್ಕೆ ಆಗ್ರಹಿಸಿ ಅಗ್ರಾಹಾರ ಬೀದಿ ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

ಬಂಟ್ವಾಳ, ಮಾ.6: ತಾಲೂಕಿನ ನಾವೂರು ಗ್ರಾಮದ ಅಗ್ರಹಾರ ಬೀದಿ ಎಂಬಲ್ಲಿ ಜನವಸತಿಗೆ ಅತ್ಯಂತ ಸಮೀಪದಲ್ಲೇ ಸಿಮೆಂಟ್ ಮಿಶ್ರಣ ಘಟಕ ಕಾರ್ಯಾಚರಿಸುತ್ತಿದ್ದು, ಇದರಿಂದ ಸಮಸ್ಯೆಗಳಾಗುತ್ತಿರುವುದಾಗಿ ಸ್ಥಳೀಯ ನಿವಾಸಿಗಳು ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ನಮ್ಮ ನಿವಾಸಗಳಿಂದ ಕೇವಲ 100 ಮೀಟರ್ ಅಂತರದಲ್ಲಿ ಈ ಸಿಮೆಂಟ್ ಕಾಂಕ್ರೀಟ್ ಮಿಶ್ರಣ ಘಟಕ ಕಾರ್ಯಾರಂಭ ಮಾಡಿದ್ದು, ಈ ಬಗ್ಗೆ ಸ್ಥಳದಲ್ಲಿ ಯಾವುದೇ ನಾಮಫಲಕವಾಗಲೀ ಯೋಜನೆಗೆ ಸಂಬಂಧಪಟ್ಟ ವಿವರಗಳಾಗಲೀ ಅಳವಡಿಸಲಾಗಿಲ್ಲ. ಜನವಸತಿಗೆ ಅತ್ಯಂತ ಸಮೀಪದಲ್ಲಿಯೇ ಇಂತಹ ಮಾಲಿನ್ಯಕಾರಕ ಘಟಕದ ಸ್ಥಾಪನೆಗೆ ಅನುಮತಿ ನೀಡುವ ಮುನ್ನ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿರುವುದು ಘಟಕದ ಬಳಿಯೇ ವಾಸವಾಗಿರುವ ಇಲ್ಲಿನ ನಿವಾಸಿಗಳ ಗಮನಕ್ಕೇ ಬಂದಿರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಘಟಕದಿಂದ ಪರಿಸರಕ್ಕೆ ಬಿಡುಗಡೆಯಗುವ ಧೂಳು ಇನ್ನಿತರ ಪರಿಸರ ಹಾನಿಕಾರಕಗಳನ್ನು ನಿಯಂತ್ರಿಸುವ ಯಾವುದೇ ತಾಂತ್ರಿಕ ವ್ಯವಸ್ಥೆಯನ್ನು ಮಾಡದೆ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಉಲ್ಲಂಘಿಸಿದೆ. ಘಟಕ ಕಾರ್ಯಾರಂಭಿಸಿದಂದಿನಿಂದ ಪರಿಸರಕ್ಕೆ ಹೊರಬಿಡುವ ವಿಪರೀತ ಧೂಳಿನಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದ್ದು, ಸಿಮೆಂಟ್, ಜಲ್ಲಿ, ಮರಳುಗಳ ಧೂಳಿನ ಸೂಕ್ಷ್ಮ ಕಣಗಳು ಪರಿಸರಕ್ಕೆ ಯಾವುದೇ ಸುರಕ್ಷಾ ಕ್ರಮ ಅನುಸರಿಸದೆ ಬಿಡುತ್ತಿರುವುದರಿಂದ ಸ್ಥಳೀಯ ನಿವಾಸಿಗಳಿಗೆ ಅಲರ್ಜಿ, ಶ್ವಾಸಕೋಶದ ಸೋಂಕು ಮೊದಲಾದ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸಿವೆ. ಸಣ್ಣ ಮಕ್ಕಳು ಹಾಗೂ ಹಿರಿಯ ನಾಗರಿಕರು ಇನ್ನಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಮನೆಗಳ ಒಳಗೂ ಹೊರಗೂ ಸಿಮೆಂಟಿನ ಧೂಳು ತುಂಬುತ್ತಿದ್ದು, ದಿನಕ್ಕೆ ಹಲವು ಬಾರಿ ಮನೆ ಶುಚಿಗೊಳಿಸಬೇಕಾದ ಅನಿವಾರ್ಯತೆ ಇದೆ. ಘಟಕದಿಂದ ಹೊರಬರುವ ಧೂಳು ಬಾವಿ ಸಹಿತ ಇತರ ನೀರಿನ ಮೂಲಗಳನ್ನೂ ಸೇರಿಕೊಂಡು ಕಲುಷಿತ ನೀರು ಕುಡಿಯಬೇಕಾದ ದುಸ್ಥಿತಿ ಇದೆ. ಪರಿಸರವಾಸಿಗಳ ಅಡಿಕೆ ತೋಟಗಳಿಗೆ ಹಾಗೂ ತರಕಾರಿ ಬೆಳೆಗಳಿಗೂ ಹಾನಿಯಾಗುತ್ತಿವೆ ಎಂದು ಜಿಲ್ಲಾಧಿಕಾರಿಗೆ ನೀಡಿರುವ ಲಿಖಿತ ದೂರಿನಲ್ಲಿ ಆರೋಪಿಸಿರುವ ಸ್ಥಳೀಯ ನಿವಾಸಿಗಳು ಸಾರ್ವಜನಿಕವಾಗಿ ತೊಂದರೆ ಉಂಟಾಗುತ್ತಿರುವ ಜನವಸತಿ ಪ್ರದೇಶದಲ್ಲಿರುವ ಈ ಸಿಮೆಂಟ್ ಮಿಶ್ರಣ ಘಟಕದ ಬಗ್ಗೆ ಸೂಕ್ತ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಹಿರಿಯ ಪರಿಸರ ಅಧಿಕಾರಿಗೂ ಮನವಿ ಸಲ್ಲಿಸಿದ್ದಾರೆ.

share
Next Story
X