ಮೇಘಾಲಯ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ: ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ನಾಯಕ ಕಾನ್ರಾಡ್ ಸಂಗ್ಮಾ ಅವರು ಎರಡನೇ ಅವಧಿಗೆ ಮೇಘಾಲಯದ ಮುಖ್ಯಮಂತ್ರಿಯಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಶನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ಇತರ ಏಳು ಶಾಸಕರು, ಯುಡಿಪಿಯ ಇಬ್ಬರು, ಬಿಜೆಪಿ ಹಾಗೂ ಎಚ್‌ಎಸ್‌ಪಿಡಿಪಿಯ ತಲಾ ಒಬ್ಬರು ಕಾನ್ರಾಡ್ ಸಂಗ್ಮಾ ಅವರ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಇವರಿಗೆ ರಾಜ್ಯಪಾಲ ಫಾಗು ಚೌಹಾಣ್ ಅವರು ರಾಜಭವನದಲ್ಲಿ ಸಚಿವರಾಗಿ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಅಸ್ಸಾಂ ಮುಖ್ಯಮಂತ್ರಿ ಮತ್ತು ಎನ್ಇಡಿಎ ಸಂಚಾಲಕ ಹಿಮಂತ ಬಿಸ್ವಾ ಶರ್ಮಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂದು ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ನ ನೆಫಿಯು ರಿಯೊ ನಾಗಾಲ್ಯಾಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ
Next Story





