ಮೆಜೆಸ್ಟಿಕ್ ಬಸ್ ನಿಲ್ದಾಣ ಬಳಿ ನಿವೃತ್ತ ಪೊಲೀಸ್ ಸಿಬ್ಬಂದಿ ಮೃತದೇಹ ಪತ್ತೆ

ಬೆಂಗಳೂರು, ಮಾ.7: ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬರ ಮೃತದೇಹ ಇಲ್ಲಿನ ಮೆಜೆಸ್ಟಿಕ್‍ನ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ದೊಡ್ಡಬಳ್ಳಾಪುರದ ಮದುರನ ಹೊಸಹಳ್ಳಿ ನಿವಾಸಿ ಮುನಿಆಂಜನೇಯ(65) ಅವರ ಮೃತದೇಹ ಪತ್ತೆಯಾಗಿದ್ದು, ಇವರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ನಿನ್ನೆ ಸ್ನೇಹಿತರ ಜೊತೆ ಧರ್ಮಸ್ಥಳಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೊರಟಿದ್ದರು. ಆದರೆ, ಮಂಗಳವಾರ ಮುಂಜಾನೆ ಮೆಜೆಸ್ಟಿಕ್‍ನಲ್ಲಿ ಶವ ಪತ್ತೆಯಾಗಿದೆ. ನಿವೃತ್ತ ಪೊಲೀಸ್ ಸಿಬ್ಬಂದಿ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮುನಿ ಆಂಜಿನೇಯ ಬಳಿಯ ನಗದು ಹಾಗೂ ಚಿನ್ನಾಭರಣ ನಾಪತ್ತೆಯಾಗಿದೆ ಎನ್ನಲಾಗಿದೆ.
ಸದ್ಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story