ಮಾ.9ರಂದು ಭ್ರಷ್ಟಾಚಾರ ವಿರೋಧಿಸಿ ಬಂದ್ ಆಚರಿಸಲು ಉಡುಪಿ ಕಾಂಗ್ರೆಸ್ ಕರೆ

ಉಡುಪಿ, ಮಾ.7: ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ ಶೇ.40 ಕಮಿಷನ್ ವಿರುದ್ಧ ಮಾ.9ರಂದು ಬೆಳಿಗ್ಗೆ ಗಂಟೆ 9ರಿಂದ 11ಗಂಟೆಯವರೆಗೆ ಎರಡು ಗಂಟೆಗಳ ಸಾಂಕೇತಿಕ ಬಂದ್‌ಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ಮೂಲಕ ಭ್ರಷ್ಟಾಚಾರದ ವಿರುದ್ಧದ ನಮ್ಮ ಧ್ವನಿಗೆ ಬೆಂಬಲವಾಗಿ ನಿಲ್ಲಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್ ವಿನಂತಿ ಮಾಡಿಕೊಂಡಿದ್ದಾರೆ.
ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಮಗ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಎಂಟು ಕೋಟಿಗೂ ಅಧಿಕ ಮೊತ್ತ ವಶಪಡಿಸಿ ಕೊಂಡಿರುವುದು ಬಿಜೆಪಿ ಸರಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಮುಖ್ಯ ಮಂತ್ರಿಗಳು ತಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Next Story





