ಚುನಾವಣಾ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ

ಕಾರ್ಕಳ : ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿಂತೆ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ಮಾದರಿ ನೀತಿ ಸಂಹಿತೆ ತಂಡ, ಸೆಕ್ಟರ್ ಅಧಿಕಾರಿಗಳ ತಂಡ, ಪೊಲೀಸ್ ತಂಡ, ಫ್ಲೈಯಿಂಗ್ ಸ್ಕ್ವಾಡ್ ತಂಡ, ವೀಡಿಯೋ ವೀಕ್ಷಣಾ, ತಂಡಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ಇಂದು ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚುನಾವಣಾ ಕರ್ತವ್ಯ ನಿರ್ವಹಣೆ ಕುರಿತು ಅಗತ್ಯ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಹಾಗೂ ಚುನಾವಣಾಕರ್ತವ್ಯಕ್ಕೆ ನಿಯೋಜಿಸಿರುವ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ಜಿಲ್ಲಾಧಿಕಾರಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್ ರೂಂ ಕೊಠಡಿಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
Next Story





