Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮತದಾರರನ್ನು ಆಕರ್ಷಿಸಲು...

ಉಡುಪಿ: ಮತದಾರರನ್ನು ಆಕರ್ಷಿಸಲು ಶೃಂಗಾರಗೊಳ್ಳುತ್ತಿರುವ ಮತಗಟ್ಟೆಗಳು!

7 March 2023 3:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಮತದಾರರನ್ನು ಆಕರ್ಷಿಸಲು ಶೃಂಗಾರಗೊಳ್ಳುತ್ತಿರುವ ಮತಗಟ್ಟೆಗಳು!

ಉಡುಪಿ, ಮಾ.7: ಮತದಾರರು ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅಗತ್ಯ ಅರಿವು ಮತ್ತು ಮತದಾನದ ಮಹತ್ವ ತಿಳಿಸಲು ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ(ಸ್ವೀಪ್) ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಮತಗಟ್ಟೆಗಳು ಕಣ್ಮನ ಸೆಳೆಯುವಂತೆ ಸಿಂಗರಿಸಿ ಮತದಾರರನ್ನು ಮತದಾನ ಕೇಂದ್ರಗಳತ್ತ ಆಕರ್ಷಿಸುವಂತೆ ಮಾಡಲಾಗುತ್ತಿದೆ.

ಕೇಂದ್ರ ಚುನಾವಣಾ ಆಯೋಗವು ಮತದಾನ ದಿನವನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸಲು ಕರೆ ನೀಡಿದ್ದು, ಮತದಾನದ ದಿನದಂದು ಮತಗಟ್ಟೆಗಳನ್ನು ಆಕರ್ಷಕ ರೀತಿಯಲ್ಲಿ ಸಿಂಗರಿಸುವಂತೆ ನಿರ್ದೇಶನ ನೀಡಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯಲ್ಲಿನ ಒಟ್ಟು 1111 ಮತಗಟ್ಟೆಗಳನ್ನು ಜಿಲ್ಲೆಯ ಸಾಂಪ್ರದಾಯಿಕ ಕಲೆ, ಸಂಸ್ಕೃತಿ, ವೈಭವವನ್ನು ಬಿಂಬಿಸುವ ಚಿತ್ರಗಳನ್ನು ರಚಿಸುವ ಗುರಿ ಹೊಂದಿದ್ದು, ಆ ಮೂಲಕ ಮತಗಟ್ಟೆ ಗಳನ್ನು ಅತ್ಯಂತ ಆಕರ್ಷಕವಾಗಿ ಸಿಂಗರಿಸುತ್ತಿದೆ.

ಜಿಲ್ಲೆಯ ಚಿತ್ರಕಲಾ ಶಿಕ್ಷಕರ ಮೂಲಕ ಎಲ್ಲಾ 1111 ಮತಗಟ್ಟೆಗಳಲ್ಲಿ ಯಕ್ಷಗಾನ, ಕಂಬಳ, ಉಡುಪಿ ಸೀರೆ, ವರ್ಲಿ ಚಿತ್ರಕಲೆ ಸೇರಿದಂತೆ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಬಿಂಬಿಸುವ ಚಿತ್ರಗಳ ರಚನೆಯಲ್ಲಿ ತೊಡಗಿದೆ. ಈ ಬಗ್ಗೆ ಪ್ರಾಯೋಗಿಕವಾಗಿ ಇತ್ತೀಚೆಗೆ ಉಡುಪಿಯ ಹನುಮಂತನಗರ ಶಾಲೆ ಯಲ್ಲಿನ 5 ಮತಗಟ್ಟೆಗಳನ್ನು, 30ಕ್ಕೂ ಅಧಿಕ ಚಿತ್ರಕಲಾ ಶಿಕ್ಷಕರು ಒಂದೇ ದಿನದಲ್ಲಿ ಚಿತ್ರಕಲೆಯ ಮೂಲಕ ಸಿಂಗರಿಸಿದ್ದು, ಇದು ನೋಡುಗರ ಕಣ್ಮನ ಸೆಳೆಯುತ್ತಿದೆ.

ಈ ಮತದಾನ ಕೇಂದ್ರಗಳಲ್ಲಿ ಚಿತ್ರ ಬಿಡಿಸುವ ಕಾರ್ಯದಲ್ಲಿ ಸರಕಾರಿ ಶಾಲೆಗಳ ಚಿತ್ರಕಲಾ ಶಿಕ್ಷಕರು ಹಾಗೂ ಕೆಲ ಅನುದಾನಿತ ಶಾಲಾ ಶಿಕ್ಷಕರು ಭಾಗವಹಿಸಿದ್ದು, ಯಾವುದೇ ಪ್ರತಿಪಲಾಕ್ಷೆಯಿಲ್ಲದೆ, ಈ ಕಾರ್ಯವನ್ನು ಚುನಾ ವಣಾ ಕರ್ತವ್ಯ ಎಂಬಂತೆ ಅತ್ಯಂತ ಶ್ರದ್ದೆಯಿಂದ ತಮಗೆ ವಹಿಸಿದ ಕಾರ್ಯವನ್ನು ಸಂಪೂರ್ಣಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಗಳನ್ನು ಈ ರೀತಿಯಾಗಿ ಸಿಂಗರಿಸಲು ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಚಿತ್ರಕಲಾ ಶಿಕ್ಷಕರನ್ನು ಈ ಕಾರ್ಯದಲ್ಲಿ ಬಳಸಿಕೊಳ್ಳುವ ಉದ್ದೇಶ ಹೊಂದಲಾಗಿದೆ.

"ಎಲ್ಲಾ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿನೂತನ ಕಾರ್ಯಕ್ರಮಗಳ ಮೂಲಕ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ. ಅದರ ಅಂಗವಾಗಿ ಜಿಲ್ಲೆಯ ಎಲ್ಲಾ 1111 ಮತಗಟ್ಟೆ ಗಳನ್ನು ಜಿಲ್ಲೆಯ ಸಾಂಪ್ರದಾಯಿಕ ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಆಕರ್ಷಕ ಚಿತ್ರಗಳನ್ನು ಬಿಡಿಸುವ ಉದ್ದೇಶವಿದೆ. ಈ ಮೂಲಕ ಮತದಾರರ ಗಮನವನ್ನು ಮತಗಟ್ಟೆಯಕಡೆಗೆ ಸೆಳೆಯುವ ಮೂಲಕ ಮತದಾನ ಪ್ರಕ್ರಿಯೆ ಯಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುವಂತೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ".
 -ಪ್ರಸನ್ನ ಎಚ್., ಸಿಇಓ ಉಡುಪಿ ಜಿಪಂ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X