ಬ್ರಹ್ಮಾವರ: ಹೋಳಿ ಸಂಭ್ರಮದಲ್ಲಿ ಮತದಾರರ ಜಾಗೃತಿ ಅಭಿಯಾನ

ಬ್ರಹ್ಮಾವರ : ಮತದಾನ ಅತ್ಯಂತ ಮಹತ್ವದ ಕಾರ್ಯವಾಗಿದ್ದು ಮತದಾನದ ಕುರಿತು ಜಾಗೃತಿ ಮೂಡಿಸುವು ದನ್ನು ಆದ್ಯತೆಯಾಗಿ ಪರಿಗಣಿಸ ಬೇಕಾಗಿದೆ ಎಂದು ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ಡಯಟ್‌ನ ಪ್ರಾಚಾರ್ಯ ಗೋವಿಂದ ಮಡಿವಾಳ ತಿಳಿಸಿದ್ದಾರೆ.
ಕೊಕ್ಕರ್ಣೆ ಸಮೀಪದ ಸೂರಾಲುವಿನಲ್ಲಿ ಹೋಳಿ ಸಂಭ್ರಮದ ಪ್ರಯುಕ್ತ ಇಂದು ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ಮೂಲಕ ಜಾಗೃತಿಯ ಉದ್ದೇಶದ ಕಾರ್ಯಕ್ರಮಗಳನ್ನು ರೂಪಿಸಿದ್ದು ಎಲ್ಲರನ್ನೂ ಒಳಗೊಂಡು ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬ್ರಹ್ಮಾವರ ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ತಾಪಂ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ಇಬ್ರಾಹಿಂಪುರ ಮಾತನಾಡಿ, ಸಂಪ್ರದಾಯ, ಆಚರಣೆಗಳಲ್ಲಿ ವಿಶಿಷ್ಟತೆಯನ್ನು ಹೊಂದಿರುವ ಈ ಪ್ರದೇಶದಲ್ಲಿ ಮತದಾನದ ಕುರಿತು ಜಾಗೃತಿಯ ಸಂದೇಶವನ್ನು ತಿಳಿಸಲು ಚಾಲನೆ ನೀಡುತ್ತಿರುವುದು ಅರ್ಥ ಪೂರ್ಣವಾಗಿದೆ. ಮತದಾನದ ಹಕ್ಕಿನ ಕುರಿತಾಗಿ ವಿದ್ಯಾರ್ಥಿಗಳಲ್ಲೂ ಈ ಹಂತದಲ್ಲೇ ಮಾಹಿತಿ ನೀಡುವುದು ಅಗತ್ಯವಿದ್ದು ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ಮೂಲಕ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ಕುರಿತು ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವ ಮಾಹಿತಿ ನೀಡಿದರು. ಹೋಳಿ ಸಂಭ್ರಮದ ಆಚರಣೆಯೊಂದಿಗೆ ಮತದಾನ ಜಾಗೃತಿಯ ಪ್ರತಿಜ್ಞಾವಿಧಿ ಸ್ವೀಕಾರ, ಮತದಾನ ಸಹಿ ಸಂಗ್ರಹ ಅಭಿಯಾನ, ಮತ್ತು ವಿವಿ ಪ್ಯಾಟ್‌ಗಳ ಮೂಲಕ ಮಾದರಿ ಮತದಾನ ಕಾರ್ಯಕ್ರಮವನ್ನು ಈ ಸಂದರ್ಭದಲ್ಲಿ ಜರುಗಿಸ ಲಾಯಿತು.
ಬ್ರಹ್ಮಾವರ ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಹೆರಿಯಣ್ಣ ಶೆಟ್ಟಿ ,ಅನಿಲ್ ಕುಮಾರ್ ಶೆಟ್ಟಿ, ಸ್ಥಳೀಯ ಶಾಲಾ ಮುಖ್ಯ ಶಿಕ್ಷಕಿ ಶಾರದಾ, ಪಂಚಾಯತ್ ನೌಕರರಾದ ರಮೇಶ್ ನಾಯ್ಕ, ಸ್ಥಳೀಯ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಕಾಡೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಕಾರ್ಯಕ್ರಮ ನಿರೂಪಿಸಿದರು.
