ದಿಲ್ಲಿ: ಸಿಸೋಡಿಯಾ, ಜೈನ್ ರಾಜೀನಾಮೆ ಅಂಗೀಕಾರ

ಹೊಸದಿಲ್ಲಿ, ಮಾ. 7: ದಿಲ್ಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹಾಗೂ ಸಚಿವ ಸತ್ಯೇಂದ್ರ ಜೈನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಅಂಗೀಕರಿಸಿದ್ದಾರೆ.
ಪ್ರಸ್ತುತ ಇಬ್ಬರೂ ಭ್ರಷ್ಟಾಚಾರ ಹಾಗೂ ಹಣ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕಾರಾಗೃಹದಲ್ಲಿ ಇದ್ದಾರೆ.
ಇದೇ ಸಂದರ್ಭ ಆಮ್ ಆದ್ಮಿ ಪಕ್ಷದ ಶಾಸಕರಾದ ಸೌರಭ್ ಭಾರದ್ವಾಜ್ ಹಾಗೂ ಆತಿಶ್ ಮರ್ಲೇನಾ ಅವರನ್ನು ಸಚಿವರನ್ನಾಗಿ ನೇಮಕ ಮಾಡಲಾಗಿದೆ.
‘‘ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಲಹೆ ಮೇರೆಗೆ ಮನೀಷ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆೆ’’ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
Next Story





