Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಮಿಕರ ಸುರಕ್ಷತೆಯ ಬಗ್ಗೆ ಕಾಳಜಿ...

ಕಾರ್ಮಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ

7 March 2023 10:25 PM IST
share
ಕಾರ್ಮಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಮಾ.7: ಇದೀಗ ಬೇಸಿಗೆ ಪ್ರಾರಂಭವಾಗಿದ್ದು, ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಕಾರ್ಮಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆ ಬಗ್ಗೆ ಅಗತ್ಯ ಸೌಲಭ್ಯ, ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ, ಶುದ್ಧ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಎಲ್ಲಾ ಉದ್ಯೋಗದಾತರ, ಗುತ್ತಿಗೆದಾರರ ಹಾಗೂ ನಿಯೋಜಕರ ಆದ್ಯ ಕರ್ತವ್ಯವಾಗಿದೆ. ವಿಶೇಷವಾಗಿ ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿರುವ ಎಲ್ಲಾ ವಿವಿಧ ಕಾರ್ಮಿಕರು, ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ಹೋಟೆಲ್ ಸಂಬಂಧಿತ ಸಂಸ್ಥೆಗಳಲ್ಲಿನ ಕಾರ್ಮಿಕರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಕಾರ್ಮಿಕರಿಗೆ ಈ ಕೆಳಕಂಡ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

1 ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆಯ ಬಗ್ಗೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಕೈಗೊಳ್ಳುವುದು ಮತ್ತು ಕಾರ್ಮಿಕರಿಗೆ ಅಗತ್ಯವಿರುವ ಸುರಕ್ಷತಾ ಸಾಮಾಗ್ರಿಗಳನ್ನು ತಪ್ಪದೇ ಒದಗಿಸುವುದು, (ಶೂಗಳು, ಹೆಲ್ಮೆಟ್, ಗ್ಲೌಸ್ ಇತ್ಯಾದಿ)

2. ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ಅಗತ್ಯ ಸಂದರ್ಭದಲ್ಲಿ ಆರೋಗ್ಯ ತಪಾಸಣಾ ವ್ಯವಸ್ಥೆಯನ್ನು ಕೈಗೊಳ್ಳುವುದು. ಕೆಲಸದ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಕಡ್ಡಾಯವಾಗಿ ವ್ಯವಸ್ಥೆಗೊಳಿಸುವುದು.

3. ಕಾರ್ಮಿಕರಿಗೆ ಶುದ್ಧ ಕುಡಿಯುವ ನೀರು ಮತ್ತು ಆಹಾರ ಸೌಲಭ್ಯವನ್ನು ವ್ಯವಸ್ಥೆಗೊಳಿಸುವುದು.

4. ಬಿಸಿಲಿನಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಅಗತ್ಯ ನೆರಳಿನ ಸೌಲಭ್ಯ ಕಲ್ಪಸುವುದು.

5. ವಯಸ್ಸಾದ ಹಿರಿಯ ಕಾರ್ಮಿಕರಿಗೆ ಮತ್ತು ಮಹಿಳಾ ಕಾರ್ಮಿಕರಿಗೆ ವಿಶೇಷವಾಗಿ ಗರ್ಭೀಣಿಯರಿಗೆ/ ಬಾಣಂತಿಯರಿಗೆ ಅಗತ್ಯ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವುದು.

6. ಕಾರ್ಮಿಕರ ಚಿಕ್ಕ ಮಕ್ಕಳಿಗೆ ಕೆಲಸದ ಸ್ಥಳದಲ್ಲಿ ಅಗತ್ಯ ಶಿಶುಪಾಲನಾ (ಅಡಿಛಿ) ವ್ಯವಸ್ಥೆ ಕೈಗೊಳ್ಳುವುದು.

7. ಅಂತರ ಜಿಲ್ಲೆ ಮತ್ತು ಅಂತರ ರಾಜ್ಯಗಳಿಂದ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ಕಾರ್ಮಿಕರಿಗೆ ನಿರ್ಮಾಣ ಕಾಮಗಾರಿಗಳ ಮಾಲಕರು, ಗುತ್ತಿಗೆದಾರರು/ ನಿರ್ವಾಹಕರು ಕಲ್ಪಿಸಿರುವ ತಾತ್ಕಾಲಿಕ ಕಾರ್ಮಿಕರ ಶೆಡ್ಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸುವುದು, (ಕುಡಿಯುವ ನೀರು, ಶೌಚಾಲಯ, ವಸತಿ)

8. ಕಾರ್ಮಿಕರಿಗೆ ವಿವಿಧ ಕಾರ್ಮಿಕ ಕಾಯ್ದೆಗಳನ್ವಯ ದೊರೆಯಬೇಕಾದ ಕನಿಷ್ಠವೇತನ, ಸಕಾಲದಲ್ಲಿ ವೇತನ ಪಾವತಿ, ಶಾಸನಬದ್ಧ ಕಟಾವಣೆಗಳಾದ (ಇ, ಈ) ಹಾಗೂ ಇತರ ಸೌಲಭ್ಯಗಳನ್ನು ತಪ್ಪದೇ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಗಳನ್ವಯ ನೀಡಬೇಕು.

ಈ ಎಲ್ಲ ಸೌಲಭ್ಯಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾರ್ಮಿಕರಿಗೆ ದೊರೆಯುವಂತೆ ಕ್ರಮವಹಿಸಲು ಸಂಬಂಧಿಸಿದವರಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ

share
Next Story
X