Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಿಯಾಂಕಾ ಗಾಂಧಿ ಆಪ್ತ ಸಹಾಯಕನ ವಿರುದ್ಧ...

ಪ್ರಿಯಾಂಕಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಜೀವ ಬೆದರಿಕೆ ಆರೋಪ ಹೊರಿಸಿದ ಬಿಗ್ ಬಾಸ್-16ರ ಸ್ಪರ್ಧಿ ಅರ್ಚನಾ

8 March 2023 10:49 AM IST
share
ಪ್ರಿಯಾಂಕಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಜೀವ ಬೆದರಿಕೆ ಆರೋಪ ಹೊರಿಸಿದ ಬಿಗ್ ಬಾಸ್-16ರ ಸ್ಪರ್ಧಿ ಅರ್ಚನಾ

ಮೀರತ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ (ಪಿಎ) ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್-16 ಟಾಪ್-5 ಫೈನಲಿಸ್ಟ್ ಅರ್ಚನಾ ಗೌತಮ್ ಆರೋಪಿಸಿದ್ದಾರೆ.

ಅರ್ಚನಾ ಗೌತಮ್ ಅವರ ತಂದೆ ತಮ್ಮ ಮಗಳಿಗೆ "ಜೀವ ಬೆದರಿಕೆ"  ಇದೆ ಎಂದು ದೂರು ನೀಡಿದ ನಂತರ ಸಂದೀಪ್ ಸಿಂಗ್ ವಿರುದ್ಧ ಆರೋಪ ಹೊರಿಸಲಾಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರ್ಚನಾ ಗೌತಮ್ ಅವರು ಇತ್ತೀಚೆಗೆ ಛತ್ತೀಸ್‌ಗಢದ ರಾಯ್ಪುರದಲ್ಲಿ ಮುಕ್ತಾಯವಾದ ಮಹಾಧಿವೇಶನದಲ್ಲಿ ಪಾಲ್ಗೊಂಡಿದ್ದಾಗ ಪ್ರಿಯಾಂಕಾ ಗಾಂಧಿ ವಾದ್ರಾರ ಆಪ್ತ ಸಹಾಯಕ ಸಂದೀಪ್ ಸಿಂಗ್ ಅವರಿಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರೊಂದಿಗೆ ಜಾತಿನಿಂದನೆಯನ್ನೂ ಆಕೆಯ ವಿರುದ್ಧ ಬಳಸಿದ್ದಾರೆ ಎಂದು ದೂರಲಾಗಿದೆ.

ಅರ್ಚನಾ  ಗೌತಮ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಘಟನೆಯ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ.

"ಪಕ್ಷಕ್ಕೆ ಹೊರೆಯಾಗಿರುವ ಅಂಥವರನ್ನು ಅವರೇಕೆ ಇಟ್ಟುಕೊಂಡಿದ್ದಾರೆ ಎಂದು ನನಗೆ ಅರ್ಥವಾಗುತ್ತಿಲ್ಲ. ಸಂದೀಪ್ ಸಿಂಗ್ ಕಾರಣಕ್ಕೆ ನಮ್ಮಂಥ ಅನೇಕ ಕಾರ್ಯಕರ್ತರ ಸಂದೇಶಗಳು ಪ್ರಿಯಾಂಕಾ ಗಾಂಧಿಯವರನ್ನು ತಲುಪುತ್ತಿಲ್ಲ" ಎಂದು ಕಿಡಿ ಕಾರಿದ್ದರು. ಇದಲ್ಲದೆ ಸಂದೀಪ್ ಸಿಂಗ್ ನನ್ನನ್ನು ಪೊಲೀಸ್ ಲಾಕಪ್‌ಗೆ ಹಾಕಿಸುವುದಾಗಿ ಬೆದರಿಸಿದರು ಎಂದೂ ದೂರಿದ್ದರು.

ಜಾತಿ ನಿಂದನೆಯನ್ನು ಮಾಡಿದ್ದಾರೆ  ಎಂದು ಉತ್ತರ ಪ್ರದೇಶದ ಮೀರತ್‌ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ಅರ್ಚನಾ ತಂದೆ ದೂರು ದಾಖಲಿಸಿದ್ದಾರೆ.

ಮೀರತ್ ಪೊಲೀಸರು ಕ್ರಿಮಿನಲ್ ಬೆದರಿಕೆ ಹಾಗೂ  ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

"ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಹ್ವಾನದ ಮೇರೆಗೆ ರಾಯ್ಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಮಹಾಧಿವೇಶನದಲ್ಲಿ ನನ್ನ ಪುತ್ರಿ ಅರ್ಚನಾ ಗೌತಮ್ ಪಾಲ್ಗೊಂಡಿದ್ದಳು. ಆಕೆ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿಯಾಗಲು ಸಂದೀಪ್ ಸಿಂಗ್ ಬಳಿ ಸಮಯಾವಕಾಶ ಕೇಳಿದ್ದಾಳೆ. ಆದರೆ, ಆತ ನನ್ನ ಪುತ್ರಿಯನ್ನು ಪ್ರಿಯಾಂಕಾ ಗಾಂಧಿ ವಾದ್ರಾಗೆ ಪರಿಚಯಿಸಲು ನಿರಾಕರಿಸಿದ್ದಾನೆ. ಅಲ್ಲದೆ ಜಾತಿನಿಂದನೆ ಹಾಗೂ ಅವಾಚ್ಯ ಶಬ್ದಗಳೊಂದಿಗೆ ಅರ್ಚನಾಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾನೆ. ಇದರೊಂದಿಗೆ, ಆಕೆಯನ್ನು ಕೊಲ್ಲುವ ಬೆದರಿಕೆಯನ್ನೂ ಒಡ್ಡಿದ್ದಾನೆ" ಎಂದು ಅರ್ಚನಾ ಗೌತಮ್ ಅವರ ತಂದೆ ಗೌತಮ್ ಬುಧ್ ಆರೋಪಿಸಿದ್ದಾರೆ.

"ಅರ್ಚನಾ ಗೌತಮ್ ಅವರ ತಂದೆಯ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಗ್ ಬಾಸ್ ಸ್ಪರ್ಧಿ ಹಾಗೂ ಕಾಂಗ್ರೆಸ್ ನಾಯಕಿ ಅರ್ಚನಾ ಗೌತಮ್ ಅವರಿಗೆ ಬೆದರಿಕೆ ಒಡ್ಡಿದ ಆರೋಪದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾರ ಆಪ್ತ ಸಹಾಯಕನ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳಲಾಗಿದೆ" ಎಂದು ಮೀರತ್ ನಗರ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ಸಿಂಗ್ ತಿಳಿಸಿದ್ದಾರೆ.

share
Next Story
X