ಶಿವಮೊಗ್ಗ: ಮನೆಯಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ 3.6 ಕೆಜಿ ಗಂಧದ ತುಂಡುಗಳು ಪತ್ತೆ

ಶಿವಮೊಗ್ಗ, ಮಾ.8: ಮನೆಯೊಂದಕ್ಕೆ ದಾಳಿ ನಡೆಸಿದ ಅರಣ್ಯ ಇಲಾಖೆ ಮೊಬೈಲ್ ಸ್ಕ್ವಾಡ್ ಮತ್ತು ಪೊಲೀಸ್ ಸಿಬ್ಬಂದಿ ಬಚ್ಚಲು ಮನೆಯಲ್ಲಿ ಬಚ್ಚಿಟ್ಟಿದ್ದ 3.6 ಕೆ.ಜಿ ಗಂಧದ ತುಂಡುಗಳನ್ನು ವಶಪಡಿಸಿಕೊಂಡ ಘಟನೆ ಶಿವಮೊಗ್ಗದ ವಿದ್ಯಾನಗರದಿಂದ ವರದಿಯಾಗಿದೆ.
ಈ ಬಗ್ಗೆ ವಿಜಯ ಕುಮಾರ್ ಎಂಬಾತನ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿಯನ್ನು ಆಧರಿಸಿ ಅರಣ್ಯ ಇಲಾಖೆ ಮೊಬೈಲ್ ಸ್ಕ್ವಾಡ್ ಮತ್ತು ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದೆ.
ಮನೆಗೆ ದಾಳಿ ನಡೆಸಿ ಶೋಧ ನಡೆಸಿದಾಗ ಬಚ್ಚಲಿನಲ್ಲಿದ್ದ ಪಾಳು ಬಿದ್ದಿದ್ದ ಸಿಮೆಂಟ್ ತೊಟ್ಟಿಯಲ್ಲಿದ್ದ ಪ್ಲಾಸ್ಟಿಕ್ ಚೀಲದಲ್ಲಿ 10 ಗಂಧದ ತುಂಡುಗಳು ಪತ್ತೆಯಾಗಿವೆ. 3.690 ಕೆ.ಜಿ. ತೂಗುವ ಈ ಗಂಧದ ತುಂಡುಗಳ ಮೌಲ್ಯ 40 ಸಾವಿರ ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





