Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಂದಬೆಟ್ಟು ಗ್ರಾಪಂ ವ್ಯಾಪ್ತಿಯಲ್ಲಿ...

ಇಂದಬೆಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ವ್ಯಾಪಕ ಭ್ರಷ್ಟಾಚಾರ: ವಸಂತ ಬಂಗೇರ ಆರೋಪ

'ಭ್ರಷ್ಟಾಚಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತಕ್ಕೆ ದೂರು'

8 March 2023 12:59 PM IST
share
ಇಂದಬೆಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ವ್ಯಾಪಕ ಭ್ರಷ್ಟಾಚಾರ: ವಸಂತ ಬಂಗೇರ ಆರೋಪ
'ಭ್ರಷ್ಟಾಚಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತಕ್ಕೆ ದೂರು'

ಬೆಳ್ತಂಗಡಿ, ಮಾ.8: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿದ್ದು, ಭ್ರಷ್ಟಾಚಾರಿಗಳ ವಿರುದ್ಧ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಎಚ್ಚರಿಕೆ ನೀಡಿದ್ದಾರೆ.

ಅವರು ಮಂಗಳವಾರ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಕಾಮಗಾರಿಗಳನ್ನು ವೀಕ್ಷಿಸಿ ಬಳಿಕ ಪಂಚಾಯತ್ ಕಚೇರಿ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರಯ ಮಾತನಾಡುತ್ತಿದ್ದರು.

ಬಿಜೆಪಿ ಆಡಳಿತದಲ್ಲಿ ಗ್ರಾಮ ಪಂಚಾಯತ್ ನಿಂದಿಡಿದು ರಾಜ್ಯ ಸರಕಾರದ ವರೆಗೂ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು , ಎಲ್ಲಾ ಕಡೆಗಳಲ್ಲೂ ನುಂಗಣ್ಣಗಳೆ ತುಂಬಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದೊಂದು ಕಾಮಗಾರಿಗೆ ಎರಡೆರಡು ಬಿಲ್ಲು ಮಾಡಲಾಗಿದೆ. ಸಾರ್ವಜನಿಕರು ನಡೆಸಿದ ಕಾಮಗಾರಿಗೆ ಪಂಚಾಯತ್ ಬಿಲ್ ಮಾಡಿರುವುದು, ಪ.ಜಾತಿ/ಪಂಗಡಗಳ ಅನುದಾನ ದುರುಪಯೋಗ, ಸೋಲಾರ್ ನೀಡದೆ ವಂಚನೆ, ವಿಕಲಚೇತನರ ಹೆಸರಿನಲ್ಲೂ ಭ್ರಷ್ಟಾಚಾರ ಸೇರಿದಂತೆ ಹತ್ತಾರು ಕಾಮಗಾರಿಗಳಲ್ಲಿ ನಕಲಿ ಬಿಲ್ ಮಾಡಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ವಸಂತ ಬಂಗೇರ ಗಂಭೀರ ಆರೋಪ ಮಾಡಿದರು.

 ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ಬಿಜೆಪಿ ಮಂತ್ರಿಗಳಿಂದಿಡಿದು ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು ಬಡವರ ಹಣವನ್ನು ಸುಲಿಗೆ ಮಾಡುತ್ತಿದ್ದಾರೆ. ಬಿಜೆಪಿ ಸುಲಿಗೆಕೋರರ ಪಕ್ಷವೆಂದು ಆರೋಪಿಸಿದ ಅವರು, ಒಂದು ಪಂಚಾಯತ್ ನಲ್ಲಿ 20 ಲಕ್ಷಕ್ಕೂ  ಹೆಚ್ಚು ರೂಪಾಯಿ ಭ್ರಷ್ಟಾಚಾರ ನಡೆದರೆ ತಾಲೂಕಿನ ಇನ್ನಿತರ ಬಿಜೆಪಿ ಆಡಳಿತದ ಪಂಚಾಯತ್ ಗಳಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿರಬಹುದು ಎಂದು ಪ್ರಶ್ನಿಸಿದರು.

ಇಂದಬೆಟ್ಟು ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಜಯರಾಂ ಗೌಡ ಬಂಗಾಡಿ ಸ್ವಾಗತಿಸಿದರು. ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ. ಗೌಡ, ಶೈಲೇಶ್ ಕುಮಾರ್ ಕುರ್ತೋಡಿ, ಪದಾಧಿಕಾರಿಗಳಾದ ಅಭಿನಂದನ್ ಹರೀಶ್ ಕುಮಾರ್, ಅನಿಲ್ ಪೈ, ಭರತ್ ಕುಮಾರ್, ಅಶ್ವಥ್ ರಾಜ್ ಇಂದಬೆಟ್ಟು, ತಾಪಂ ಮಾಜಿ ಸದಸ್ಯ ಗಣೇಶ್ ಕನಾಲು, ಕಾರ್ಮಿಕ ಘಟಕದ ಸುರೇಶ್ ಇಂಚರ, ಗ್ರಾಮ ಪಂಚಾಯತ್ ಸದಸ್ಯ ವೀರಪ್ಪ ಮೊಯ್ಲಿ, ಅಬ್ದುಲ್ ಸಮದ್, ರಾಜೇಶ್ ಪುದುಶೇರಿ, ಪ್ರವೀಣ್ ಗೌಡ ವಿ.ಜಿ., ಮಧುಕರ ಸುವರ್ಣ, ರವಿ ನೇತ್ರಾವತಿ ನಗರ, ನಾರಾಯಣ ಟಿ. ನೇತ್ರಾವತಿ ನಗರ, ಎಲಿಯಮ್ಮ ಬಂಗಾಡಿ, ಅಜಯ್ ಎ.ಜೆ. ಮಟ್ಲ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ವಿವಿಧ ಭ್ರಷ್ಟಾಚಾರಗಳ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾರನ್ನು ಮಾಜಿ ಶಾಸಕ ವಸಂತ ಬಂಗೇರ ತರಾಟೆಗೆ ತೆಗೆದುಕೊಂಡರು. ಪ್ರತಿಭಟನಾಕಾರರು ತಮ್ಮ ವಾರ್ಡ್ ನ ಸಮಸ್ಯೆಗಳನ್ನು ಮುಂದಿಟ್ಟು ಪಂಚಾಯತ್ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ಬಳೆಂಜ ಅವರಿಗೆ ಮನವಿ ಸಲ್ಲಿಸಲಾಯಿತು.

share
Next Story
X